ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂತಾರ ಪಾರ್ಟ್-2 ಇದೇ ನವೆಂಬರ್ ನಲ್ಲಿ ಮುಹೂರ್ತ ಫಿಕ್ಸ್..!

Twitter
Facebook
LinkedIn
WhatsApp
ಕಾಂತಾರ ಪಾರ್ಟ್-2 ಇದೇ ನವೆಂಬರ್ ನಲ್ಲಿ ಮುಹೂರ್ತ ಫಿಕ್ಸ್..!

ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ 2  ಸಿನಿಮಾದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ.  ಸಿನಿಮಾ ಮಹೂರ್ತದ (Muhurta) ಕುರಿತಂತೆ ಪಂಜುರ್ಲಿ (Panjurl) ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ಸಿನಿಮಾ ತಂಡ ಮುಹೂರ್ತಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ.

ಮತ್ತೊಂದು ಸಮಾಚಾರವೆಂದರೆ, ಈ ಸಿನಿಮಾದಲ್ಲಿ 14ನೇ ಶತಮಾನದಿಂದ ಶುರುವಾಗುವ ಕಥೆ ಕೂಡ ಇರಲಿದೆಯಂತೆ. ಈ ಕುರಿತು ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಗಾಂಧಿ ನಗರದ ಗಲ್ಲಿ ಗಲ್ಲಿಗಳಲ್ಲಿ ಕಾಂತರ ಕಥೆ ಹಾಟ್ ಕೇಕ್ ತರಹ ಮಾರಾಟವಾಗುತ್ತಿದೆ.

ಕಾಂತಾರ’ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ’ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಸರಳವಾಗಿ ಜರುಗಲಿದೆ.

ಕಾಂತಾರ (Kantara) ಸೂಪರ್ ಡೂಪರ್ ಹಿಟ್ ಆದಂತೆಯೇ ‘ಕಾಂತಾರ 2’ ಅದಕ್ಕಿಂತ ಹೆಚ್ಚಿನ ಯಶಸ್ಸು ಪಡೆದು ಗೆದ್ದು ಬೀಗಲೇಬೇಕೆಂದು ರಿಷಬ್ ಶೆಟ್ಟಿ ಕೂಡ ತೆರೆಮರೆಯಲ್ಲಿ ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಕಾಲಿಡುತ್ತಿದ್ದಾರೆ.

ಅದಕ್ಕಾಗಿ ತಮ್ಮ ಲುಕ್ ಕೂಡ ಜೇಂಜ್ ಮಾಡಿ, ಸಿನಿಮಾ ಕಥೆಯಲ್ಲಿ ಸಾಕಷ್ಟು ಕೆಲಸ ಮಾಡಿಯೇ ಕಾಂತಾರ 2ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿನಿಮಾ ಮುಹೂರ್ತ ಸಮಾರಂಭದ ದಿನ ಸಿಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ