ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!

Twitter
Facebook
LinkedIn
WhatsApp
ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!

ಉಡುಪಿ : ಆಲದ ಮರವನ್ನು ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು, ಓರ್ವ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ.

ಮೃತನನ್ನು ಬಿಹಾರ ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಎಂದು ಗುರುತಿಸಲಾಗಿದೆ.

ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ಖಾಸಗಿಯವರಿಗೆ ಸೇರಿದ ನಾಗಬನ ಮತ್ತು ಮನೆ ಮೇಲೆ ಅಪಾಯಕಾರಿಯಾಗಿ ವಾಲಿದ್ದ ಗೋಳಿ ಮರವನ್ನು ಕಡಿಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕಡಿದ ಮರ ಉರುಳಿಬಿದ್ದಾಗ ಅದರಡಿ ಮೂವರು ಕಾರ್ಮಿಕರು ಮರದಡಿಗೆ ಸಿಲುಕಿಕೊಂಡಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತಿಬ್ಬರನ್ನು ರಕ್ಷಣೆ ಮಾಡಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿದ್ದಾರೆ.

ಬಂಟ್ವಾಳ : ತುಂಬೆಯಲ್ಲಿ ಸರಣಿ ಅಪಘಾತಕ್ಕೆ ಕಾರಣವಾದ ಕಾರು ಚಾಲಕನ ಅಜಾಗರೂಕತೆಯ ಚಾಲನೆ..!

ಬಂಟ್ವಾಳ: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಪಾಣೆಮಂಗಳೂರು ಕಡೆ ಬರುತ್ತಿದ್ದ ಕಾರೊಂದು ತುಂಬೆ ಸ್ಟೀಲ್ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಡಿಕ್ಕಿ ಸಂಭವಿಸಿದೆ.

ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.

ಆದರೆ ಘಟನೆಯಿಂದ ಮೂರು ಕಾರುಗಳು ಜಖಂಗೊಂಡಿದೆಯಾದರೂ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.

ತುಂಬೆಯಲ್ಲಿರುವ ಸ್ಟೀಲ್ ಪ್ಯಾಕ್ಟರಿಯೊಂದಕ್ಕೆ ಬಂದಿರುವ ಗ್ರಾಹಕರು ಹಾಗೂ ಪ್ಯಾಕ್ಟರಿಯ ಮಾಲಕರ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ಭೇಟಿ ನೀಡಿದ್ದಾರೆ. ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದರಿಂದ ಕೆಲ ಕಾಲ ಸುಗಮ ವಾಹನ ಸಮಚಾರಕ್ಕೆ ಅಡಚಣೆ ಉಂಟಾಗಿತ್ತು. ಕೂಡಲೇ ಸ್ತಳೀಯ ಪೊಲೀಸರು ತೆರಳಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ