ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಪು : ಕಾರು ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸಾವು!

Twitter
Facebook
LinkedIn
WhatsApp
ಕಾಪು : ಕಾರು ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸಾವು!

ಕಾಪು, ನ 23 : ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ಬುಧವಾರ ಮಧ್ಯಾಹ್ನ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಮೃತ ದುರ್ದೈವಿ. ಮೂಳೂರಿನ ಅಂಚೆ ಕಚೇರಿಯಿಂದ ಹಣ ಪಡೆದು ಮನೆಗೆ ಮರಳುತ್ತಿದ್ದರು. ಕಾರು ಉಡುಪಿ ಕಡೆಗೆ ಅತೀ ವೇಗದಲ್ಲಿ ಚಲಿಸುತ್ತಿತ್ತು.ಡಿಕ್ಕಿಯ ರಭಸಕ್ಕೆ ಲೀಲಾವತಿ ಗಾಳಿಗೆ ಹಾರಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಸಾವನ್ನಪ್ಪಿದ್ದಾಳೆ.

ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾಪು ಸಿಐ ಜಯಶ್ರೀ ಎಂ ಮಾನೆ, ಎಸ್‌ಐ ಅಬ್ದುಲ್ ಖಾದರ್ ಸ್ಥಳಕ್ಕೆ ಭೇಟಿ ನೀಡಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಲೀಲಾವತಿ ಅವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಮೃತ್ಯು- ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ

ಸುರತ್ಕಲ್‌ : ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. ಸ್ಥಳಕ್ಕೆ ಸಿಪಿಐ ಎಂ ಮುಖಂಡರಾದ ಮುನೀರ್ ಕಾಟಿಪಳ್ಳ,ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಕಾಂಗ್ರೆಸ್ ಮುಖಂಡ ಪುರುಷೋತ್ತಮ ಚಿತ್ರಾಪುರ ಆಗಮಿಸಿ ಆಕ್ರೋಶಿತರನ್ನು ಸಮಾಧಾನಿಸಿದರು.

ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ನ್ಯಾಯ ಒದಗಿಸಲು ಆಗ್ರಹಿಸಿದರು. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆಯ ಹಿನ್ನಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಮುಖಂಡರು, ಮೃತರ ಕುಟುಂಬಸ್ಥರು, ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.


ಮುಖಂಡರ ಬೇಡಿಕೆಯಂತೆ ಪ್ರಕರಣದ ತನಿಖೆಗಾಗಿ ಖಾಸಗಿ ವೈದ್ಯರನ್ನು ಒಳಗೊಂಡ ಎಂಟು ಜನ ತಜ್ಞ ವೈದ್ಯರ ತಂಡವನ್ನು ರಚಿಸುವುದಾಗಿ ಘೋಷಿಸಿದರು. ಕಾಲಮಿತಿಯ ಒಳಗಡೆ ವರದಿ ಪಡೆದು ಕ್ರಮ ಕೈಗೊಳ್ಳುವುದು, ತಪ್ಪಿತಸ್ಥ ವೈದ್ಯರ ಮೇಲೆ ಕ್ರಮ ಜರುಗಿಸುವುದಾಗಿ ತಿಳಿಸಿದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ರಾತ್ರಿ 8 ಗಂಟೆಗೆ ಸುರತ್ಕಲ್‌ ಮುಕ್ಕದಲ್ಲಿ ಅಪಘಾತ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಮೊಯ್ದಿನ್‌ ಫರ್ಹಾನ್‌ ನನ್ನು ಸುರತ್ಕಲ್‌ ನಲ್ಲಿರುವ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತ ನಡೆದ ಬಳಿಕ ಬಾಲಕ ಮನೆಯವರು ಹಾಗು ಸ್ನೇಹಿತರೊಂದಿಗೆ ಮಾತನಾಡಿದ್ದ ಎನ್ನಲಾಗಿದೆ.

ತುರ್ತು ಶಸ್ತ್ರಚಿಕಿತ್ಸೆ ನಡೆಸಲು ಹೇಳಿದ್ದ ವೈದ್ಯಾಧಿಕಾರಿ ಶಸ್ತ್ರ ಚಿಕಿತ್ಸೆಯ ವೇಳೆ ನೀಡಿದ್ದ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಪರಿಣಾಮ ಬಾಲಕ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪ ಮಾಡಿದ್ದಾರೆ.


ಇಂದು ಬೆಳಗ್ಗೆ 9ಕ್ಕೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮಧ್ಯಾಹ್ನವಾದರೂ ಎಚ್ಚರಗೊಳ್ಳದ ಬಾಲಕ ನಂತರ ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಶಸ್ತ್ರ ಚಿಕಿತ್ಸೆಯ ನೆಪದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist