ಶನಿವಾರ, ಡಿಸೆಂಬರ್ 14, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಪು: ಮಹಿಳಾ ಪೇದೆ ಆತ್ಮಹತ್ಯೆ ಪ್ರಕರಣ; ಪತಿ ಬಂಧನ..!

Twitter
Facebook
LinkedIn
WhatsApp
ಕಾಪು: ಮಹಿಳಾ ಪೇದೆ ಆತ್ಮಹತ್ಯೆ ಪ್ರಕರಣ; ಪತಿ ಬಂಧನ..!

ಕಾಪು: ಕಾಪು ಪೊಲೀಸ್‌ ಠಾಣೆಯ ಮಹಿಳಾ ಪೊಲೀಸ್‌ ಜ್ಯೋತಿ (32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪದಡಿ ಕಾಪು ಪೊಲೀಸರು ಮಾ.30ರಂದು ರಾತ್ರಿ ವೇಳೆ ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಇಳಕಲ್‌ ತಾಲೂಕಿನ ರವಿಕುಮಾರ್‌(35) ಬಂಧಿತ ಆರೋಪಿ. ಈತ ಕೆಎಸ್‌ಆರ್‌ಟಿಸಿಯಲ್ಲಿ ಮೆಕ್ಯಾನಿಕ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, 2017ರಲ್ಲಿ ತನ್ನದೇ ಊರಿನ ಜ್ಯೋತಿಯನ್ನು ಮದುವೆಯಾಗಿದ್ದ. ಜ್ಯೋತಿ ಕಾಪು ಠಾಣೆ ಸಿಬಂದಿಯಾಗಿರುವುದರಿಂದ ಇವರಿಬ್ಬರು ಠಾಣೆಯ ಸಮೀಪದಲ್ಲೇ ಇರುವ ಪೊಲೀಸ್‌ ವಸತಿಗೃಹದಲ್ಲಿ ವಾಸವಾಗಿದ್ದರು. ಮಾ. 29ರಂದು ರಾತ್ರಿ ಇವರಿಬ್ಬರ ಮಧ್ಯೆ ಗಲಾಟೆ ನಡೆದಿದ್ದು, ಇದೇ ವಿಚಾರದಲ್ಲಿ ನೊಂದುಕೊಂಡು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಡೈರಿ ಪತ್ತೆ: ಜ್ಯೋತಿ ರೂಮಿನಲ್ಲಿ ಡೈರಿಯೊಂದು ಲಭಿಸಿದೆ. ಅದರಲ್ಲಿ ನನ್ನ ಸಾವಿಗೆ ಪತಿಯ ಅನುಮಾನವೇ ಕಾರಣ ಎಂದು ಉಲ್ಲೇಖಿಸಲಾಗಿದೆ. ಇತರ ಕಾರಣಗಳೂ ಡೈರಿಯಲ್ಲಿದ್ದು, ಆ ವಿವರಗಳನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಅವರ ತಾಯಿ ದೇವಮ್ಮ ವಿಟ್ಲಾಪುರ ನೀಡಿದ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀತಿ ಸಂಹಿತೆ ಉಲ್ಲಂಘನೆ : 24 ಲೀಟರ್‌ ಮದ್ಯ ವಶ

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 31 ರಂದು ಅಬಕಾರಿ ಇಲಾಖೆ ವತಿಯಿಂದ 10,680 ರೂ. ಮೌಲ್ಯದ 24.030 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಬೈಕ್ ಗೆ ಲಾರಿ ಡಿಕ್ಕಿ ಅಪ್ರಾಪ್ತ ಸವಾರ ಸಾವು

ಗಂಗೊಳ್ಳಿ : ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬೈಕ್ ಸವಾರ ಸಾವನಪ್ಪಿ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಗಂಗೊಳ್ಳಿ ಅಂಚೆ ಕಚೇರಿ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಮುಹಮ್ಮದ್ ಕಾಶಿಫ್(17) ಎಂದು ಗುರುತಿಸಲಾಗಿದೆ. ಸಹಸವಾರ ಮುಹಮ್ಮದ್ ಫೈಝ್(14) ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನವು ಕೂಡಲೇ ಆಂಬ್ಯುಲೆನ್ಸ್ ಕರೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ತಂಡ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದು, ಅದರಲ್ಲಿ ಗಂಭೀರವಾಗಿ ಗಾಯಗೊಂಡ ಕಾಶಿಫ್ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist