ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸಾವು!
ಕಾರ್ಕಳ ನವೆಂಬರ್ 27: ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ.
ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಯರ್ಲಪಾಡಿ – ಗೋವಿಂದೂರು ಕಡೆಯಿಂದ ಬರುತ್ತಿದ್ದ ಬಸ್‌ಗೆ ಬೈಲೂರು ಹೈಸ್ಕೂಲ್ ಸಾಗುವ ತಿರುವಿನಲ್ಲಿ ಕಾರ್ಕಳದೆಡೆಗೆ ಸಾಗುವ ಬೈಕ್ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಸವಾರ ಮೃತಪಟ್ಟಿದ್ದಾರೆ. ಸಹ ಸವಾರನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ಸಾಕು ನಾಯಿಗಳಿಗೆ ಪಾಲಿಕೆಯಿಂದ ಪರವಾನಿಗೆ ಪಡೆಯಲು ಸಾರ್ವಜನಿಕರಿಗೆ ಸೂಚನೆ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ.
ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ ಪರಿಣಾಮಗಳು ಬೀರುತ್ತಿದೆ ಹಾಗೂ ನಗರದಲ್ಲಿ ರೇಬಿಸ್ ಕಾಯಿಲೆಗಳು ಹರಡುವ ಸಂಭವ ಹೆಚ್ಚಾಗಿರುತ್ತದೆ. ಈ ಎಲ್ಲ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆಯು ಈಗಾಗಲೇ ನಗರದಲ್ಲಿ ಸಾಕು ನಾಯಿಗಳಿಗೆ ಪರವಾನಿಗೆಯನ್ನು ಪಡೆಯುವಂತೆ ಕ್ರಮಕೈಗೊಳ್ಳಲಾಗಿದೆ.
ದಾಖಲೆಗಳು: ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ಪಾಲಿಕೆಯಿಂದ ಪರವಾನಿಗೆ ಪಡೆಯಲು ಅರ್ಜಿ ಪ್ರತಿ ಪಡೆದುಕೊಳ್ಳಬೇಕು. ಸಾಕು ನಾಯಿಗೆ ನೀಡಲಾಗಿರುವ ಲಸಿಕಾ ದಾಖಲೆ, ಮಾಲೀಕರ ಆಧಾರ್ ಕಾರ್ಡ್, ನೆರೆಹೊರೆಯವರಿಂದ ನಿರಾಕ್ಷೇಪಣಾ ಪತ್ರ, ಸಾಕು ನಾಯಿಯ 2 ಭಾವಚಿತ್ರ ಇತ್ಯಾದಿ ದಾಖಲೆಗಳನ್ನು ಸಲ್ಲಿಸಿ ಪರವಾನಿಗೆಯನ್ನು ಪಡೆದುಕೊಳ್ಳಬೇಕು.
ಅದೇ ರೀತಿ ಸಾಕು ಪ್ರಾಣಿಗಳು ಮತ್ತು ಮರಿಗಳನ್ನು ರಸ್ತೆಯ ಬದಿಗಳಲ್ಲಿ ಬಿಡುವುದು ಹಾಗೂ ಸ್ಥಳೀಯ ಸಾರ್ವಜನಿಕರಿಗೆ ತೊಂದರೆಯುಂಟು ಮಾಡುವುದು ಕಂಡುಬಂದಲ್ಲಿ ಸಾಕು ಪ್ರಾಣಿಗಳ ಮಾಲೀಕರ ವಿರುದ್ಧ ಪಾಲಿಕೆಯು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದೆಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.