ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆರು ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ

Twitter
Facebook
LinkedIn
WhatsApp
Untitled 6

ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ (Transfers) ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಮಂಜುಳಾ ಎನ್ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಪ್ರಭಾರ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್ ಬಿ ಅವರನ್ನು ಕೃಷಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇದೇ ರೀತಿ, ಇ-ಆಡಳಿತ, RDPR ನಿರ್ದೇಶಕಿ ಸುಭಾ ಕಲ್ಯಾಣ್ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ (ಮಧ್ಯಾಹ್ನದ ಬಿಸಿ ಊಟ) ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ