ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

11 ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಆದೇಶಿಸಿದ ಕರ್ನಾಟಕ ಸರ್ಕಾರ

Twitter
Facebook
LinkedIn
WhatsApp
Untitled 15

ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಆರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ (IAS Officers Transfer) ಮಾಡಿದ್ದ ಕರ್ನಾಟಕ ಸರ್ಕಾರ ಇದೀಗ, 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ. ಕಪಿಲ್ ಮೋಹನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈವರೆಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ಪಂಕಜ್ ಕುಮಾರ್ ಪಾಂಡೆ ಅವರು ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ಪಂಕಜ್ ಅವರನ್ನು ಮುಕ್ತಿಗೊಳಿಸಲಾಗಿದೆ.

ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಉಮಾಶಂಕರ್ ಎಸ್.ಆರ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಮಂಜುನಾಥ ಪ್ರಸಾದ್ ಎನ್, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್​ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕ್ಕುಮಾರ್ ಅವರನ್ನು ಬೆಂಗಳೂರಿನ ಕೃಷಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಈ ಹುದ್ದೆಯನ್ನು ರವಿಶಂಕರ್ ಜೆ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ರವಿಶಂಕರ್ ಅವರನ್ನು ಮುಕ್ತಿಗೊಳಿಸಲಾಗಿದೆ. ಮೋಹನ್ ರಾಜ್ ಕೆ.ಪಿ. ಅವರನ್ನು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯನ್ನು ರಾಜೇಂದರ್ ಕುಮಾರ್ ಕಟಾರಿಯಾ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ರಾಜೇಂದರ್ ಅವರನ್ನು ಮುಕ್ತಿಗೊಳಿಸಲಾಗಿದೆ.

ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಸಾಂಖ್ಯಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿ’ಸೋಜಾ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂಎಸ್ಎಂಇ ಮತ್ತು ಗಣಿ) ಸರ್ಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯನ್ನು ಪಂಕಜ್ ಕುಮಾರ್ ಪಾಂಡೆ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ಪಂಕಜ್ ಅವರನ್ನು ಮುಕ್ತಿಗೊಳಿಸಲಾಗಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ಸದಸ್ಯ ಗಿರೀಶ್ ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಅಟಲ್ ಸ್ನೇಹಿ ಕೇಂದ್ರ (AJSK)ದ ನಿರ್ದೇಶಕ ಗಂಗೂ ಬಾಯಿ ರಮೇಶ್ ಮನಕರ್ ಅವರನ್ನು ವರ್ಗಾವಣೆಗೊಳಿಸಿ ತೆರವಾದ ಸ್ಥಾನಕ್ಕೆ ಕರೀಗೌಡ ಅವರನ್ನು ನೇಮಿಸಿ ಆದೇಶಿಸಲಾಗಿದೆ. ತುಮಕೂರು ಉಪ ಜಿಲ್ಲಾಧಿಕಾರಿ ಪಾಟೀಲ್ ಯಲಗೌಡ ಶಿವನಗೌಡ ಅವರನ್ನು ಕೃಷಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯನ್ನು ಶರತ್ ಬಿ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಇವರನ್ನು ಈ ಸೇವೆಯಿಂದ ಮುಕ್ತಿಗೊಳಿಸಲಾಗಿದೆ.

ಜಗದೀಶ ಜಿ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಈ ಹುದ್ದೆಯನ್ನು ಡಾ. ರಾಮ್ ಪ್ರಶಾಂತ್ ಮನೋಹರ್ ವಿ ಅವರು ನಿಭಾಯಿಸುತ್ತಿದ್ದರು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವ್ಯವಸ್ಥಾಪಕ ನಿರ್ದೇಶ ಡಾ. ಮಹೇಶ್ ಎಂ ಅವರನ್ನು ಗಿರೀಶ್ ಆರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ಸದಸ್ಯರನ್ನಾಗಿ ನೇಮಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist