ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು (ಬುಧವಾರ) ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ಪುದುಚೇರಿ, ಕಾರೈಕಲ್, ತಮಿಳುನಾಡುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಕೊಂಕಣ, ಗೋವಾ, ವಿದರ್ಭ, ಛತ್ತೀಸ್‌ಗಢ, ತಮಿಳುನಾಡು, ಪುದುಚೇರಿ, ಮುಂತಾದ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮಾನ್ಸೂನ್ ಮಾರುತಗಳು ಉತ್ತರ ಕಡೆಗೆ ಬೀಸುತ್ತಿರುವುದರಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಯಾವುದೇ ರಾಜ್ಯಗಳಿಗೆ ಯೆಲ್ಲೋ ಅಥವಾ ರೆಡ್ ಅಲರ್ಟ್ ಘೋಷಿಸಿಲ್ಲವಾದರೂ, ಮಳೆಯ ಪ್ರಮಾಣ ಹೆಚ್ಚಾಗಲಿದೆ. ಜುಲೈ 28ರವರೆಗೆ ಗುಜರಾತ್, ವಿದರ್ಭ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.