ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆ

Twitter
Facebook
LinkedIn
WhatsApp
Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ (Rainfall) ಹೆಚ್ಚಾಗಲಿದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ (Kalburgi Rain) ಹಾಗೂ ಬೀದರ್ (Bidar Rain) ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ತುಸು ದುರ್ಬಲಗೊಂಡಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಚುರುಕುಗೊಂಡಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇಂದು ಸಂಜೆಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ರಾಯಚೂರು ಮತ್ತು ಬಳ್ಳಾರಿಯಲ್ಲಿ ಬಿಸಿಲು ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆ ಪ್ರಮಾಣ ಕಡಿಮೆಯಾದರೂ ರಾಜ್ಯದ ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡಿನ ವಿವಿಧ ಪ್ರದೇಶಗಳಲ್ಲಿ ಇಂದಿನಿಂದ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆ ಸುರಿಯಲಿದೆ.

ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜಲಾವೃತಗೊಂಡಿದ್ದ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ಮಳೆ ಆರ್ಭಟ ಕಡಿಮೆಯಾಗಿದ್ದರೂ ನದಿಗಳು ತುಂಬಿ ಹರಿಯುತ್ತಿವೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮುಂತಾದ ಕಡೆಗಳಲ್ಲಿ ಇಂದು ಮೋಡ ಮುಸುಕಿದ ವಾತಾವರಣವಿದೆ. ಇಂದು ಮಳೆಯ ವಾತಾವರಣ ಇರುವ ಕಾರಣಕ್ಕೆ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗುವುದರಿಂದ ಈ ಭಾಗದ ಸಮುದ್ರ ತೀರದಲ್ಲಿ ಗಾಳಿಯ ವೇಗ ಸಾಮಾನ್ಯವಾಗಿರಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು (ಬುಧವಾರ) ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ಪುದುಚೇರಿ, ಕಾರೈಕಲ್, ತಮಿಳುನಾಡುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಕೊಂಕಣ, ಗೋವಾ, ವಿದರ್ಭ, ಛತ್ತೀಸ್‌ಗಢ, ತಮಿಳುನಾಡು, ಪುದುಚೇರಿ, ಮುಂತಾದ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ.

ಮಾನ್ಸೂನ್ ಮಾರುತಗಳು ಉತ್ತರ ಕಡೆಗೆ ಬೀಸುತ್ತಿರುವುದರಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಯಾವುದೇ ರಾಜ್ಯಗಳಿಗೆ ಯೆಲ್ಲೋ ಅಥವಾ ರೆಡ್ ಅಲರ್ಟ್ ಘೋಷಿಸಿಲ್ಲವಾದರೂ, ಮಳೆಯ ಪ್ರಮಾಣ ಹೆಚ್ಚಾಗಲಿದೆ. ಜುಲೈ 28ರವರೆಗೆ ಗುಜರಾತ್, ವಿದರ್ಭ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ