ಬೆಂಗಳೂರು: ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮ್ಯಾಂಡಸ್ ಚಂಡಮಾರುತದಿಂದ (Cyclone Mandous) ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರು ಹೊರತುಪಡಿಸಿ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಇಂದಿನಿಂದ (ಡಿಸೆಂಬರ್ 9) ಡಿ. 12ರವರೆಗೆ ಭಾರೀ ಮಳೆಯಾಗಲಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗಲಿದೆ.
ಮ್ಯಾಂಡಸ್ ಚಂಡಮಾರುತ ಕಾರೈಕಲ್ನಿಂದ ಪೂರ್ವ ಆಗ್ನೇಯಕ್ಕೆ ಸುಮಾರು 500 ಕಿಮೀ ದೂರದಲ್ಲಿದೆ. ಇದು ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಪ್ರವೇಶಿಸಲಿದ್ದು, ಇಂದು ಮಧ್ಯರಾತ್ರಿ 70 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗ ಮತ್ತು ರಾಯಲಸೀಮಾದ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು ಹೊರತುಪಡಿಸಿ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಡಿಸೆಂಬರ್ 12ರವರೆಗೂ ಭಾರೀ ಮಳೆ ಮುಂದುವರಿಯಲಿದ್ದು, ಚಂಡಮಾರುತದ ಪ್ರಭಾವದಿಂದಾಗಿ ಗಾಳಿಯೂ ಬೀಸಲಿದೆ ಎಂದು ತಿಳಿಸಿದ್ದಾರೆ. ಮ್ಯಾಂಡಸ್ ಚಂಡಮಾರುತದ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ‘ಹಳದಿ’ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಹಾಗೂ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 12ರವರೆಗೆ ವಾರಾಂತ್ಯದಲ್ಲಿ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಡಿಸೆಂಬರ್ 11 ಮತ್ತು 12ರಂದು ಗುಡುಗು ಮತ್ತು ಮಿಂಚು ಸಹಿತ ಮಳೆ ಸುರಿಯಲಿದೆ.
ಮ್ಯಾಂಡಸ್ ಚಂಡಮಾರುತದ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ‘ಹಳದಿ’ ಅಲರ್ಟ್ ನೀಡಲಾಗಿದೆ. ಬೆಂಗಳೂರು ಹಾಗೂ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 12ರವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಡಿಸೆಂಬರ್ 11 ಮತ್ತು 12ರಂದು ಗುಡುಗು ಮತ್ತು ಮಿಂಚು ಸಹಿತ ಮಳೆ ಸುರಿಯಲಿದೆ.
ಬೆಂಗಳೂರಿನಲ್ಲಿ ಗುರುವಾರ ಕನಿಷ್ಠ ತಾಪಮಾನವು 17.3 ಡಿಗ್ರಿ ಸೆಲ್ಸಿಯಸ್ ಇತ್ತು. ಡಿಸೆಂಬರ್ 11ರವರೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನವು 18 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗುವುದಿಲ್ಲ ಎಂದು IMD ಹೇಳಿದೆ. ಮ್ಯಾಂಡಸ್ ಚಂಡಮಾರುತ ಇಂದು ಮಧ್ಯರಾತ್ರಿ ನೆರೆಯ ಆಂಧ್ರಪ್ರದೇಶದ ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ತಮಿಳುನಾಡಿನ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ತಮಿಳುನಾಡಿನ ಕರಾವಳಿ, ಪುದುಚೇರಿ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ತಮಿಳುನಾಡು ಮತ್ತು ರಾಯಲಸೀಮಾದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮುಂಜಾನೆಯೇ ಮಂಜು ಬೀಳುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್ ಮತ್ತು ಹರಿಯಾಣದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist