ಮಂಗಳವಾರ, ಏಪ್ರಿಲ್ 23, 2024
ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ-ಚುನಾವಣೆ ಮುನ್ನವೇ ಸೂರತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ..!-ಮಂಗಳೂರು: ಹೆಬ್ಬಾವಿನ ಹೊಟ್ಟೆಯಲ್ಲಿ ಬರೋಬ್ಬರಿ 11 ಏರ್ ಗನ್ ಬುಲೆಟ್.!-ಏಪ್ರಿಲ್ 29 ರ ಒಳಗೆ ಬರ ಪರಿಹಾರ ಮಾಡಲು ಸುಪ್ರೀಂ ಕೋರ್ಟ್ ನಲ್ಲಿ ಒಪ್ಪಿದ ಕೇಂದ್ರ ಸರ್ಕಾರ.!-ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Karnataka Rain: ಬೆಂಗಳೂರು, ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ

Twitter
Facebook
LinkedIn
WhatsApp
Karnataka Rain: ಬೆಂಗಳೂರು, ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ

ಬೆಂಗಳೂರು: ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮ್ಯಾಂಡಸ್ ಚಂಡಮಾರುತದಿಂದ (Cyclone Mandous) ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರು ಹೊರತುಪಡಿಸಿ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಇಂದಿನಿಂದ (ಡಿಸೆಂಬರ್ 9) ಡಿ. 12ರವರೆಗೆ ಭಾರೀ ಮಳೆಯಾಗಲಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗಲಿದೆ.

 

ಮ್ಯಾಂಡಸ್ ಚಂಡಮಾರುತ ಕಾರೈಕಲ್‌ನಿಂದ ಪೂರ್ವ ಆಗ್ನೇಯಕ್ಕೆ ಸುಮಾರು 500 ಕಿಮೀ ದೂರದಲ್ಲಿದೆ. ಇದು ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಪ್ರವೇಶಿಸಲಿದ್ದು, ಇಂದು ಮಧ್ಯರಾತ್ರಿ 70 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗ ಮತ್ತು ರಾಯಲಸೀಮಾದ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ