ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜಿನಾಮೆ ​..!

Twitter
Facebook
LinkedIn
WhatsApp
ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜಿನಾಮೆ ​..!

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ (IPS officer Pratap Reddy) ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ (Government) ಪತ್ರ ಬರೆದಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್​ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. ಆದರೆ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ. ಇದು ರಾಜ್ಯ ಪೊಲೀಸ್​ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಹಿರಿಯ ಐಪಿಎಸ್​ ಅಧಿಕಾರಿ ಸಿ. ಹೆಚ್​ ಪ್ರತಾಪ್​ ರೆಡ್ಡಿ ಅವರು ಜು. 01 1964ರಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಸಿದರು. ಪ್ರತಾಪ್​ ರೆಡ್ಡಿ ಬಿ.ಟೆಕ್​ ಪದವೀಧರರು. ಇವರು 1991ರಲ್ಲಿ ಕರ್ನಾಟಕ ಕೆಡರ್​ನ ಐಪಿಎಸ್​ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿದರು. ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್​ ಆಗಿ ಪ್ರತಾಪ್​ ರೆಡ್ಡಿ ಅವರು ಕೆಲಸ ಆರಂಭಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಪಿಯಾಗಿ, ಸಿಐಡಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಭೇದಿಸಿದ್ದಾರೆ.

ಪ್ರತಾಪ್​ ರೆಡ್ಡಿ ಅವರು ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಂಬೈ ಮತ್ತು ಬೆಂಗಳೂರು ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಬ್ಯಾಂಕಿಂಗ್​ ಮತ್ತು ಸೈಬರ್​ ಸೆಕ್ಯುರಿಟಿ ವಿಭಾಗದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಿಕೊಂಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಪ್ರತಾಪ್​ ರೆಡ್ಡಿ ಅವರನ್ನು ಕಮಲ್​ ಪಂತ ಅವರ ಬಳಿಕ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾಗಿ ನೇಮಕ ಮಾಡಲಾಗಿತ್ತು.

ರಾಜ್ಯದ ಕೂಲ್​ ಐಪಿಎಸ್​ ಅಧಿಕಾರಿಗಳಲ್ಲಿ ಪ್ರತಾಪ್​ ರೆಡ್ಡಿ ಅವರು ಸಹ ಒಬ್ಬರು. ಪ್ರತಾಪ್​ ರೆಡ್ಡಿ ಅವರು ರಾಷ್ಟ್ರಪತಿ ಪದಕ ಮತ್ತು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist