ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು : ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸಾವು ; 20 ಮಂದಿಗೆ ಗಾಯ.!

Twitter
Facebook
LinkedIn
WhatsApp
ಕಾಸರಗೋಡು : ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸಾವು ; 20 ಮಂದಿಗೆ ಗಾಯ.!

ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟು, ವಿದ್ಯಾರ್ಥಿಗಳು ಸೇರಿದಂತೆ 20 ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ.ಚಾಲಕ ಚೇತನ್ ಕುಮಾರ್ (37) ಮೃತಪಟ್ಟವರು.

ಟೋಲ್ ಬೂತ್ ನಿರ್ಮಿಸಲು ಚಾಲಿಂಗಾಲ್ ನಲ್ಲಿ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಿದ್ದು, ಈ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಬಸ್ಸಿನಡಿಯಲ್ಲಿ ಸಿಲುಕಿದವರನ್ನು ಪರಿಸರವಾಸಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹೊರತೆಗೆದು ಆಸ್ಪತ್ರೆಗೆ ತಲುಪಿಸಿದರು ಎಂದು ತಿಳಿದುಬಂದಿದೆ.

ಪೆಟ್ರೋಲ್ ಟ್ಯಾಂಕರ್​ಗೆ ಬಸ್‌ ಡಿಕ್ಕಿ ​- ಭೀಕರ ಅಪಘಾತದಲ್ಲಿ 21ಮಂದಿ ಸಾವು, 38 ಮಂದಿಗೆ ಗಾಯ

ಅಫ್ಘಾನಿಸ್ತಾನದಲ್ಲಿ ಪೆಟ್ರೋಲ್ ಟ್ಯಾಂಕರ್​, ಬಸ್​​ ಮತ್ತು ಬೈಕ್ ಮಧ್ಯೆ​ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಬಸ್​​ನಲ್ಲಿದ್ದ 21 ಜನ ದುರ್ಮರಣ ಹೊಂದಿದ್ದಾರೆ.

38 ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಬೈಕ್​​​ಗೆ ಡಿಕ್ಕಿಯಾದ ನಂತರ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಹಾರ್‌ನಿಂದ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಪೆಟ್ರೋಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ವರದಿ ಆಗಿದೆ.

ಹೆಲ್ಮಂಡ್‌ನ ಗ್ರಿಷ್ಕ್ ಜಿಲ್ಲೆಯ ರಾಜಧಾನಿ ಕಾಬೂಲ್ ಮತ್ತು ಉತ್ತರದ ಹೆರಾತ್ ನಗರದ ನಡುವಿನ ಮುಖ್ಯ ಹೆದ್ದಾರಿಯಲ್ಲಿ ಭಾನುವಾರ ಅಪಘಾತ ಸಂಭವಿಸಿದೆ.

ಇಂದು ಮುಂಜಾನೆ, ನಮಗೆ ಇದುವರೆಗೆ ಬಂದ ಮಾಹಿತಿಯ ಪ್ರಕಾರ, ಬಸ್, ಟ್ಯಾಂಕರ್ ಮತ್ತು ಮೋಟಾರ್ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 21 ಜನರು ಸಾವನ್ನಪ್ಪಿದ್ದಾರೆ ಎಂದು ಗವರ್ನರ್ ವಕ್ತಾರ ಮೊಹಮ್ಮದ್ ಖಾಸಿಮ್ ರಿಯಾಜ್ ತಿಳಿಸಿದ್ದಾರೆ.

ಸದ್ಯ ಘಟನೆಯಲ್ಲಿ ಗಾಯಗೊಂಡ 38 ಗಾಯಾಳುಗಳನ್ನು ತಕ್ಷಣವೇ ಗ್ರಿಷ್ಕ್ ಜಿಲ್ಲೆಯ ಹೆಲ್ಮಂಡ್, ಲಷ್ಕರ್ಗಾ ನಗರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಗಾಯಗೊಂಡವರಲ್ಲಿ 11 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ಆಗಿದೆ. ಇನ್ನು ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೆಲ್ಮಂಡ್‌ನಲ್ಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ