ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

kerala police: ಆರೋಪಿಗಳ ಬಂಧನಕ್ಕೆ ಹೋದ ಬೆಂಗಳೂರು ಪೊಲೀಸರನ್ನು ಲಂಚ ಪಡೆದ ಆರೋಪಕ್ಕೆ ಬಂಧಿಸಿದ ಕೇರಳ ಪೊಲೀಸರು!

Twitter
Facebook
LinkedIn
WhatsApp
kerala police: ಆರೋಪಿಗಳ ಬಂಧನಕ್ಕೆ ಹೋದ ಬೆಂಗಳೂರು ಪೊಲೀಸರನ್ನು ಲಂಚ ಪಡೆದ ಆರೋಪಕ್ಕೆ ಬಂಧಿಸಿದ ಕೇರಳ ಪೊಲೀಸರು!

ಕೊಚ್ಚಿ: ವಂಚನೆ ಪ್ರಕರಣದ ಆರೋಪಿಗಳ ಬಂಧಿಸಲು ಕೇರಳಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರೇ ಲಂಚ ಪಡೆದ ಆರೋಪದ ಮೇರೆಗೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.

ಆಂಗ್ಲ ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ವಂಚನೆ ಪ್ರಕರಣದ ಆರೋಪಿಗಳಿಂದ ಲಂಚ ಪಡೆದ ಆರೋಪದಲ್ಲಿ ‍ಇನ್‌ಸ್ಪೆಕ್ಟರ್‌ ಸೇರಿ 4 ಮಂದಿ ಕರ್ನಾಟಕದ ಪೊಲೀಸ್‌ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಿಶೀಲನೆ ಬಳಿಕ ವಶಕ್ಕೆ ಪಡೆದವರ ಮಾಹಿತಿ ನೀಡುವುದಾಗಿ ಪೊಲೀಸರು ಹೇಳಿದ್ದು, ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ಈ ಪೊಲೀಸರು ತೆರಳಿದ್ದರು ಎಂದು ಹೇಳಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ವರದಿಯಲ್ಲಿರುವಂತೆ, ‘ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣದ ಸಂಬಂಧ ಆರೋಪಿಯನ್ನು ಬಂಧಿಸಲು ಕರ್ನಾಟಕ ಪೊಲೀಸರು ಆಗಸ್ಟ್ 1ರಂದು ಕೊಚ್ಚಿಗೆ ತೆರಳಿದ್ದರು. ಅಲ್ಲಿ ಅವರು ಇಬ್ಬರು ಆರೋಪಿಗಳಿಂದ 3.95 ಲಕ್ಷ ರೂ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಕೊಚ್ಚಿಯ ಕಮಲಶ್ಶೇರಿ ಪೊಲೀಸರು ಕರ್ನಾಟಕದ 4 ಪೊಲೀಸ್ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೊಚ್ಚಿ ಪೊಲೀಸ್‌ ಉಪ ಆಯುಕ್ತ ಬೇಬಿ ಪಿವಿ, ‘ಪ್ರಕರಣ ಸಂಬಂಧ ನಾವು ಕರ್ನಾಟಕ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಗುರುತು ಹಾಗೂ ಕೊಚ್ಚಿಗೆ ಬಂದಿರುವ ಉದ್ದೇಶದ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಮಾಹಿತಿ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಪ್ರಕರಣ ದಾಖಲಾಗಿದೆ‘ ಎಂದು ಹೇಳಿದ್ದಾರೆ.

ಮೈಸೂರು: ವಂಚನೆ ಆರೋಪದಡಿ 10 ಆರ್​ಟಿಓ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲು:

ಮೈಸೂರು: ವಂಚನೆ ಆರೋಪದಡಿ 10 ಆರ್​ಟಿಓ (RTO) ಅಧಿಕಾರಿಗಳು ಸೇರಿದಂತೆ 35 ಜನರ ವಿರುದ್ಧ ನಗರದ ಲಕ್ಷ್ಮಿಪುರಂ ಪೊಲೀಸ್ (Police) ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರದೀಪ್ ಕುಮಾರ್ ಎಂಬುವರು ದೂರು ನೀಡಿದ್ದಾರೆ. ಸಂಬಂಧವಿಲ್ಲದ ವ್ಯಕ್ತಿಗಳಿಂದ ಕಚೇರಿಯಲ್ಲಿ ಕೆಲಸ ನಿರ್ವಹಣೆ ಮಾಡಿಸುವುದು ಮತ್ತು ನಕಲಿ ರಸೀತಿ ಬಳಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದರು. ಇದಕ್ಕೆ ಆರ್​ಟಿಓ ಅಧಿಕಾರಿಗಳು ಸಾಥ್ ನೀಡಿರುವ ಆರೋಪ ಕೇಳಿಬಂದಿದೆ.

ಈ ಬಗ್ಗೆ ಪ್ರದೀಪ್ ಪೋಟೋ ವಿಡಿಯೋ ಸಮೇತ ದೂರು ದಾಖಲಿಸಿದ್ದಾರೆ. ಆರ್​ಟಿಓ ಜಂಟಿ ಸಾರಿಗೆ ಆಯುಕ್ತ ಸಿ ಟಿ ಮೂರ್ತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ದೇವಿಕಾ, ಸೂಪರಿಡೆಂಟ್ ಕುಮಾರ್ ಎಫ್​ಡಿ ಚೆನ್ನವೀರಪ್ಪ ಸೇರಿ 35 ಜನರ ವಿರುದ್ಧ ದೂರು ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ