ಹಾಡಹಗಲೇ ಜನನಿಬೀಡ ಪ್ರದೇಶದಲ್ಲಿ ಬೈಕ್ ನಲ್ಲಿ ಯುವತಿಯ ಅಪಹರಣ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಭೋಪಾಲ್: ಹಾಡಹಗಲೇ ಜನನಿಬೀಡ ಪ್ರದೇಶದಲ್ಲಿ ಯುವತಿಯೊಬ್ಬಳನ್ನು ಇಬ್ಬರು ಮುಸುಕುಧಾರಿಗಳು ಅಪಹರಿಸಿದ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ.
ಯುವತಿ ಬಸ್‍ನಲ್ಲಿ ಬಂದು, ಆಕೆಯ ಸಹೋದರನಿಗಾಗಿ ಪೆಟ್ರೋಲ್ ಬಂಕ್ ಒಂದರ ಬಳಿ ಕಾಯುತ್ತಿದ್ದಾಗ ಆಕೆಯ ಅಪಹರಣವಾಗಿದೆ. ಅಪಹರಣಕಾರರಲ್ಲಿ ಓರ್ವ ಹೆಲ್ಮೆಟ್ ಧರಿಸಿದ್ದರೆ, ಮತ್ತೋರ್ವ ಮುಖಕ್ಕೆ ಬಟ್ಟೆಯನ್ನು ಸುತ್ತಿಕೊಂಡಿದ್ದ. ಯುವತಿಯನ್ನು ಅಪಹರಿಸುತ್ತಿರುವ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಪಹರಣಕ್ಕೊಳಗಾದ ಯುವತಿ ಬಿಎ ವ್ಯಾಸಂಗ ಮಾಡುತ್ತಿದ್ದು, ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ನಿವಾಸಿಯಾಗಿದ್ದಾಳೆ. ತನ್ನ ಕುಟುಂಬದೊಂದಿಗೆ ದೀಪಾವಳಿ ಆಚರಿಸಲು ಊರಿಗೆ ತೆರಳಿದ್ದಳು. ಈ ವೇಳೆ ಯುವತಿಯ ಅಪಹರಿಸಲಾಗಿದೆ.
ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆಟ್ರೋಲ್ ಬಂಕ್ ಸೇರಿದಂತೆ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ. ಅಪಹರಣಕ್ಕೆ ಕಾರಣ ತಿಳಿದು ಬಂದಿಲ್ಲ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹುಲ್ಲಿನ ಬಣವೆಯಲ್ಲಿ ಪ್ರಿಯಕರನ ಜತೆ ಪತ್ನಿ ರಾಸಲೀಲೆ: ಬಣವೆಗೆ ಬೆಂಕಿ ಹಚ್ಚಿ ಪತ್ನಿ ಜೀವಂತವಾಗಿ ಸುಟ್ಟು ಹಾಕಿದ ಪತಿ
ಬರೇಲಿ (ನವೆಂಬರ್ 20, 2023): ಉತ್ತರ ಪ್ರದೇಶದ ಬರೇಲಿಯಲ್ಲಿ ಹೆಂಡತಿಯನ್ನು ಗಂಡ ಜೀವಂತವಾಗಿ ಸುಟ್ಟುಹಾಕಿದ್ದಾರೆ. ಆಕೆ ಬೇರೊಬ್ಬ ಪುರುಷನೊಂದಿಗೆ ಅನ್ಯೋನ್ಯವಾಗಿ ಇರುವುದನ್ನು ನೋಡಿದ ಪತಿ ಸಿಟ್ಟಿಗೆದ್ದು ಸುಟ್ಟು ಹಾಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುಪಿಯ ಬರೇಲಿ ಜಿಲ್ಲೆಯ ಗೊಟಿಯಾ ಗ್ರಾಮದಲ್ಲಿ 35 ವರ್ಷದ ಮಹಿಳೆಯೊಬ್ಬರು ಬೇರೊಬ್ಬ ಪುರುಷನೊಂದಿಗೆ ಇರುವುದನ್ನು ನೋಡಿದ ಪತಿ ಆಕೆಯನ್ನು ಸುಟ್ಟು ಹಾಕಿ ಕೊಂದಿದ್ದಾರೆ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ. ಶನಿವಾರ ತಡರಾತ್ರಿ ಗ್ರಾಮದ ಸಮೀಪದ ಹೊಲವೊಂದರಲ್ಲಿ ಅಂಜಲಿ ಎಂದು ಗುರುತಿಸಲಾದ ಮಹಿಳೆಯ ಸುಟ್ಟ ಮೃತದೇಹ ಪತ್ತೆಯಾಗಿದೆ ಎಂದೂ ಪೊಲೀಸರು ಹೇಳಿದ್ದಾರೆ.
ಶಾಹಿ ಪೊಲೀಸ್ ಠಾಣೆಯು ಈ ಪ್ರದೇಶದ ಅಧಿಕಾರ ವ್ಯಾಪ್ತಿಯನ್ನು ಹೊಂದಿದ್ದು, ಕೊಲೆಯ ಆರೋಪದ ಮೇಲೆ ಆರೋಪಿ ನೇಪಾಲ್ ಸಿಂಗ್‌ನನ್ನು ತಕ್ಷಣವೇ ಬಂಧಿಸಿದೆ. ಆದರೆ, ಉದ್ದೇಶಪೂರ್ವಕವಾಗಿ ಅಂಜಲಿಯನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಅಂಜಲಿಯ ಮನೆಯವರು ಆರೋಪಿಸಿದ್ದರು.
ಇನ್ನು, ಅಂಜಲಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ. ಆದರೆ, ಮಹಿಳೆಯೊಂದಿಗಿದ್ದ ವ್ಯಕ್ತಿ ಇನ್ನೂ ಬದುಕಿದ್ದಾರಾ ಅಥವಾ ಅವರನ್ನೂ ಕೊಲೆ ಮಾಡಲಾಗಿದ್ಯಾ ಅನ್ನೋ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ಘಟನೆಯ ವಿವರ..
ತನ್ನ ಹೆಂಡತಿ ಒಬ್ಬ ವ್ಯಕ್ತಿಯೊಂದಿಗೆ ಒಣಹುಲ್ಲಿನ ರಾಶಿಯ ಮೇಲೆ ಮಲಗಿರುವುದನ್ನು ಆರೋಪಿ ಪತಿ ನೇಪಾಲ್ ಸಿಂಗ್ ನೋಡಿದನು. ಇದರಿಂದ ಸಿಟ್ಟಿಗೆದ್ದ ಪತಿ ಬಣವೆಗೆ ಬೆಂಕಿ ಹಚ್ಚಿ ಹೊರಟು ಹೋದ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ. ತನ್ನ ಪತ್ನಿಗೆ ಬೇರೊಬ್ಬ ಪುರುಷನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರಿಂದ ಆಕೆಯನ್ನು ಕೊಂದಿರುವುದಾಗಿ ವಿಚಾರಣೆ ವೇಳೆ ನೇಪಾಲ್ ಸಿಂಗ್ ಪೊಲೀಸರಿಗೆ ತಿಳಿಸಿದ್ದಾನೆ ಎಂದೂ ಹೇಳಲಾಗಿದೆ.