ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

KL Rahul: ಮೂರನೇ ಟೆಸ್ಟ್​ ಪಂದ್ಯದಿಂದಲೂ ಹೊರಬಿದ್ದ ಕೆ ಎಲ್ ರಾಹುಲ್..!

Twitter
Facebook
LinkedIn
WhatsApp
KL Rahul: ಮೂರನೇ ಟೆಸ್ಟ್​ ಪಂದ್ಯದಿಂದಲೂ ಹೊರಬಿದ್ದ ಕೆ ಎಲ್ ರಾಹುಲ್..!

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಟೆಸ್ಟ್ ಪಂದ್ಯಗಳ ಸರಣಿಯ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಇದಕ್ಕಾಗಿ ಉಭಯ ತಂಡಗಳು ಈಗಾಗಲೇ ತಯಾರಿ ನಡೆಸಿವೆ. ಹಾಗೆಯೇ ಟೀಂ ಇಂಡಿಯಾ ಕೂಡ ಸರಣಿಯ ಉಳಿದ ಮೂರು ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿತ್ತು. ಆ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್ (KL Rahul) ಕೂಡ ಸ್ಥಾನ ಪಡೆದಿದ್ದರು. ಇದು ಟೀಂ ಇಂಡಿಯಾ (Team India) ಅಭಿಮಾನಿಗಳಿಗೆ ಸಂತಸ ತಂದಿತ್ತು. ಇದೀಗ ಟೀಂ ಇಂಡಿಯಾ ಪಾಳಯದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಂಡು ಎರಡನೇ ಟೆಸ್ಟ್​ ಪದ್ಯಕ್ಕೆ ಅಲಭ್ಯರಾಗಿದ್ದ ಕೆಎಲ್ ರಾಹುಲ್, ಇದೀಗ ಮೂರನೇ ಟೆಸ್ಟ್​ ಪಂದ್ಯದಿಂದಲೂ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಬಿಸಿಸಿಐನಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬರದಿದ್ದರೂ, ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಅದರಂತೆ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ರಾಹುಲ್ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುತ್ತಿರುವುದು ಖಚಿತವಾಗಿದೆ. ಅಲ್ಲದೆ ರಾಹುಲ್ ಬದಲಿಯಾಗಿ ರಣಜಿ ಟ್ರೋಫಿಯಲ್ಲಿ ಶತಕಗಳ ಸರಮಾಲೆ ಕಟ್ಟಿರುವ ಮತ್ತೊಬ್ಬ ಕನ್ನಡಿಗ ದೇವದತ್ ಪಡಿಕ್ಕಲ್ ಅವರನ್ನು ಟೀಂ ಇಂಡಿಯಾಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗುತ್ತಿದೆ.

ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಕೆಎಲ್ ರಾಹುಲ್ ಬದಲಿಯಾಗಿ ದೇವದತ್ ಪಡಿಕ್ಕಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರಸಕ್ತ ರಣಜಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿರುವ ಪಡಿಕ್ಕಲ್ ಕಳೆದ 8 ಇನ್ನಿಂಗ್ಸ್​ಗಳಲ್ಲಿ 4 ಶತಕ ಸಿಡಿಸಿದ್ದಾರೆ. ರಣಜಿಯಲ್ಲಿ ಮಾತ್ರವಲ್ಲದೆ, ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅನಧಿಕೃತ ಟೆಸ್ಟ್ ಸರಣಿಯಲ್ಲೂ ಪಡಿಕ್ಕಲ್ ಶತಕದ ಇನ್ನಿಂಗ್ಸ್ ಆಡಿದ್ದರು. ಹೀಗಾಗಿ ಅದ್ಭುತ ಫಾರ್ಮ್​ನಲ್ಲಿರುವ ಪಡಿಕ್ಕಲ್​ಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿರುವುದು ಸಂತಸದ ವಿಷಯವಾಗಿದೆ. ಆದರೆ ಆಡುವ ಹನ್ನೊಂದರ ಬಳಗದಲ್ಲಿ ಪಡಿಕ್ಕಲ್​ಗೆ ಅವಕಾಶ ಸಿಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist