ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Srinivas Poojary: ಕೋಟಾ ಶ್ರೀನಿವಾಸ ಪೂಜಾರಿಗೆ ಮಹತ್ವದ ಹುದ್ದೆ ನೀಡಿದ ಬಿಜೆಪಿ

Twitter
Facebook
LinkedIn
WhatsApp
Srinivas Poojary

ಬಿಜೆಪಿಯ ಸಂಸದೀಯ ಮಂಡಳಿಯು ಲೋಕಸಭೆಯ ಮುಖ್ಯ ಸಚೇತಕ ಹಾಗೂ ಸಚೇತಕರನ್ನು ನೇಮಿಸಿದ್ದು, ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಮಂದಿ ಸಚೇತಕರನ್ನಾಗಿ ನೇಮಿಸಿ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಸೋಮವಾರ (ಜುಲೈ 29) ಆದೇಶ ಹೊರಡಿಸಿದ್ದಾರೆ.

ಡಾ ಸಂಜಯ್ ಜೈಸ್ವಾಲ್ ರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರಾಗಿ ನೇಮಿಸಲಾಗಿದೆ. ಇನ್ನು ಈ 16 ಜನರ ಸಚೇತಕರ ಪೈಕಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ (Srinivas Poojary) ಅವರಿಗೆ ಸ್ಥಾನ ಸಿಕ್ಕಿದೆ. ಕೋಟ ಶ್ರೀನಿವಾಸ ಪೂಜಾರಿಯವರು ಮೊದಲ ಬಾರಿಗೆ ಸಂಸತ್‌ ಸದಸ್ಯರಾಗಿದ್ದು, ಅವರನ್ನು ಸಚೇತಕರನ್ನಾಗಿ ನೇಮಿಸಿದ್ದು ವಿಶೇಷ. ಕರ್ನಾಟಕದಿಂದ ಬೇರೆ ಯಾರನ್ನೂ ನೇಮಿಸಿಲ್ಲ.

ಇದೊಂದು ಮಹತ್ವದ ಜವಾಬ್ದಾರಿಯನ್ನು ಪೂಜಾರಿಯವರ ಹೆಗಲ ಮೇಲೆ ಹೊರಿಸುವ ಮೂಲಕ ಬಿಜೆಪಿಯು ಅವರಿಗೆ ರಾಷ್ಟ್ರರಾಜಕಾರಣದಲ್ಲಿ ತಮ್ಮ ದಕ್ಷತೆಯನ್ನು ತೋರಿಸಲು ಮತ್ತೊಂದು ಅವಕಾಶವನ್ನು ನೀಡಿದೆ.

ಇನ್ನು ತಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟ ಶ್ರೀನಿವಾಸ್ ಪೂಜಾರಿ (Srinivas Poojary) ಧನ್ಯವಾದ ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

 “ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಅಭಿನಂದನೆಗಳು. ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಶ್ರೀನಿವಾಸ್ ಪೂಜಾರಿ ಅವರು ಲೋಕಸಭೆಯ ಸಚೇತಕರಾಗಿಯು ಉತ್ತಮವಾಗಿ ಜವಾಬ್ದಾರಿ ನಿರ್ವಹಿಸುವರೆಂಬ ವಿಶ್ವಾಸದೊಂದಿಗೆ ಶುಭ ಹಾರೈಸುವೆ’’ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಭಾರತೀಯ ಜನತಾ ಪಕ್ಷವು ಸಂಸದ ಸಂಜಯ್ ಜೈಸ್ವಾಲ್ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಿಸಿದೆ

ದಿಲೀಪ್ ಸಾಲ್ಕಿಯಾ, ಗೋಪಾಲ್ಜಿ ಠಾಕೂರ್, ಸಂತೋಷ್ ಪಾಂಡೆ, ಕಮಲಜೀತ್ ಸೆಹ್ರಾವತ್, ಧವಲ್ ಲಕ್ಷ್ಮಣಭಾಯ್ ಪಟೇಲ್, ದೇವುಸಿನ್ ಚೌಹಾಣ್, ಜುಗಲ್ ಕಿಶೋರ್ ಶರ್ಮಾ, ಕೋಟಾ ಶ್ರೀನಿವಾಸ್ ಪೂಜಾರಿ, ಸುಧೀರ್ ಗುಪ್ತಾ, ಸ್ಮಿತಾ ಉದಯ್ ವಾಘ್, ಅನಂತ ನಾಯಕ್, ದಾಮೋದರ್ ಅಗರ್ವಾಲ್, ಅನಂತ ನಾಯಕ್, ದಾಮೋದರ್ ಅಗರ್ವಾಲ್, ಕೊಂಡಾ ವಿಶ್ವಶ್ವಕ್ ಕುಮಾರ್ ರೆಡ್ಡಿ ಮತ್ತು ಖಗೇನ್ ಮುರ್ಮು ಅವರನ್ನು ಬಿಜೆಪಿ ಸಚೇತಕರನ್ನಾಗಿ ನೇಮಿಸಿದೆ

ನಿರ್ಮಲಾ ಸೀತಾರಾಮನ್ ಅವರನ್ನು ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸುರುವ ಸಿದ್ದರಾಮಯ್ಯ, ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಖಾರವಾಗಿ ಹೇಳಿದ್ದಾರೆ.

ಭಾನುವಾರದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮರೆಮಾಚುವ ಹತಾಶ ಪ್ರಯತ್ನ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಾವೇ ಹೆಣೆದ ಬಲೆಯಲ್ಲಿ ಸಿಕ್ಕಿ ಹಾಕಿಕೊಡಿರುವುದು ದುರಂತ. ಸಚಿವರ ಗೊಂದಲಮಯ ಹೇಳಿಕೆಗಳ ಸಿಕ್ಕುಗಳನ್ನೆಲ್ಲ ಬಿಡಿಸುತ್ತಾ ಹೋದರೆ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವುದು ಚೊಂಬು ಮಾತ್ರ ಎನ್ನುವುದು ಸಾಬೀತಾಗುತ್ತದೆ.

ಹತ್ತು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಎಷ್ಟು ಪಟ್ಟು ಹೆಚ್ಚಾಗಿದೆ ಎನ್ನುವುದನ್ನು ಅವರು ಮರೆತಿದ್ದಾರೆ. ಇದು ಅವರ ಅಜ್ಞಾನವೋ, ಇಲ್ಲವೇ ಜನತೆಯ ದಾರಿ ತಪ್ಪಿಸುವ ಹುನ್ನಾರವೋ? ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು.

2024-25ರ ಅವಧಿಯ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ರೂ.48.02 ಲಕ್ಷ ಕೋಟಿಯಾಗಿದೆ. ಈ ಅವಧಿಯಲ್ಲಿ ನಮಗೆ ಕೇಂದ್ರ ಅನುದಾನದ ರೂಪದಲ್ಲಿ ರೂ.15,229 ಕೋಟಿ ಮತ್ತು ತೆರಿಗೆ ಹಂಚಿಕೆಯಲ್ಲಿ ರೂ.44.485 ಕೋಟಿ ನೀಡಲಾಗುತ್ತದೆ. ಇದು ಒಟ್ಟು ಬಜೆಟ್ ಗಾತ್ರದ ಶೇಕಡಾ 1.2 ರಷ್ಟಾಗುತ್ತದೆ.
2013-14ರ ಪ್ರಮಾಣದಲ್ಲಿ (ಶೇಕಡಾ 1.9)ಯೇ ಅನುದಾನ ಮತ್ತು ತೆರಿಗೆ ಹಂಚಿಕೆಯ ಹಣವನ್ನು 2024-25ರ ಅವಧಿಯಲ್ಲಿಯೂ ಕರ್ನಾಟಕಕ್ಕೆ ನೀಡಿದ್ದರೆ ಕೇಂದ್ರ ಸರ್ಕಾರದ ನೀಡುವ ಹಣದ ಮೊತ್ತ ರೂ.91,580 ಕೋಟಿಗಳಾಗುತ್ತಿತ್ತು. ಅಂದರೆ ನರೇಂದ್ರ ಮೋದಿ ಸರ್ಕಾರ ಮಾಡಿರುವ ಅನ್ಯಾಯದಿಂದಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ ಕರ್ನಾಟಕ 31,866 ಕೋಟಿ ರೂಪಾಯಿ ಕಳೆದುಕೊಂಡಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist