ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋಟ ಶ್ರೀನಿವಾಸ ಪೂಜಾರಿ, ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್‌ನಿಂದ ತುರ್ತು ಬುಲಾವ್..?

Twitter
Facebook
LinkedIn
WhatsApp
Kota Srinivasa Pujari

ಬೆಂಗಳೂರು: ಕರ್ನಾಟಕದಲ್ಲಿ ಪ್ರತಿಪಕ್ಷ ನಾಯಕನ ನೇಮಕವಾಗಿಲ್ಲದಿರುವುದು ಮತ್ತು ರಾಜ್ಯ ಬಿಜೆಪಿ (BJP) ನಾಯಕರನ್ನು ದೆಹಲಿ ನಾಯಕರು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳ ಮಧ್ಯೆಯೇ ಇದೀಗ ಕೋಟ ಶ್ರೀನಿವಾಸ್ ಪೂಜಾರಿ (Kota Srinivasa Pujari), ಕೆಎಸ್ ಈಶ್ವರಪ್ಪ ಅವರನ್ನು ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್(BJP High Command) ಸೂಚನೆ ನೀಡಿದೆ ಎನ್ನಲಾಗಿದೆ. ಹೈಕಮಾಂಡ್‍ನಿಂದ ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ಗುರುವಾರವೇ ನಾಯಕರು ದೆಹಲಿಗೆ ಹೋಗಲಿದ್ದಾರೆ ಎನ್ನಲಾಗಿದೆ.

ಗುರುವಾರ ಮಧ್ಯಾಹ್ನ 3.30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಮೂವರೂ ನಾಯಕರಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಕಳೆದ ವಾರ ಮಾಜಿ ಸಿಎಂ ಡಿವಿ ಸದಾನಂದ ಗೌಡರನ್ನು ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ಹೈಕಮಾಂಡ್, ಕೊನೆಯ ಕ್ಷಣದಲ್ಲಿ ಭೇಟಿ ಮಾಡದೆ ವಾಪಸ್ ಕಳುಹಿಸಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗುವುದಕ್ಕಾಗಿ ಸದಾನಂದ ಗೌಡರು ದೆಹಲಿಗೆ ತೆರಳಿದ್ದರು.

ಈ ಮಧ್ಯೆ, ಹೈಕಮಾಂಡ್​​ನಿಂದ ಕರೆ ಬಂದಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ನನ್ನ ಜೊತೆಗೆ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಪಿ.ಸಿ. ಮೋಹನ್ ಅವರಿಗೂ ಬರಲು ಹೇಳಿದ್ದಾರೆ. ಯಾಕೆ ಕರೆದಿದ್ದಾರೆ ಗೊತ್ತಿಲ್ಲ. ಅಲ್ಲಿಗೆ ಹೋದ ಮೇಲೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ. 

ಈ ಮಧ್ಯೆ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿ ಹೈಕಮಾಂಡ್ ಉನ್ನತ ಹುದ್ದೆ ನೀಡಿದರು ಅಚ್ಚರಿ ಇಲ್ಲ. ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರು. ಬಿಲ್ಲವ ಸಮುದಾಯಕ್ಕೆ ಸೇರಿದ ಇವರು ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕೋಟದ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾಗಿದ್ದರು.

ಕೆಲಸ ಅರಸಿ ಕಾಂಬೋಡಿಯಾಕ್ಕೆ ಹೋದ ಕಾಫಿನಾಡ ಯುವಕನಿಗೆ ಇಕ್ಕಟ್ಟು : ಭಾರತಕ್ಕೆ ಕರೆತರಲು ಸಚಿವೆ ಕರಂದ್ಲಾಜೆ ಯತ್ನ

ಕೆಲಸ ಅರಸಿ ಕಾಂಬೋಡಿಯಾಕ್ಕೆ ಹೋದ ಕಾಫಿನಾಡ ಯುವಕನಿಗೆ ಇಕ್ಕಟ್ಟು: ಸರ್ಕಾರಕ್ಕೆ ಮೊರೆಯಿಟ್ಟ ಪೋಷಕರು

ಕೆಲಸಕ್ಕೆಂದು ಕಾಂಬೋಡಿಯಾಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕನೋರ್ವ ಮೋಸದ ಜಾಲಕ್ಕೆ ಸಿಲುಕಿ ಬಂಧಿಯಾಗಿರುವ ಘಟನೆ ಬೆಳೆಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಸುರೇಶ್, ಪ್ರೇಮಾ ದಂಪತಿಗಳ ಮಗ ಅಶೋಕ್ ಕೆಲಸಕ್ಕಾಗಿ ವಿದೇಶಕ್ಕೆ ತೆರಳಿ ಇದೀಗ ಅತಂತ್ರನಾಗಿದ್ದಾನೆ. ಹೆತ್ತವರ ಸಂಕಷ್ಟದ ಮಧ್ಯೆಯೂ ಬಿಕಾಂ ಪದವೀಧರನಾಗಿ ಹೆತ್ತವರಿಗೆ ಆಸರೆ ಆಗಲೇಬೇಕೆಂದು ಕೆಲಸಕ್ಕಾಗಿ ವಿದೇಶಕ್ಕೆ ತೆರಳಿ ಇದೀಗ ಅತಂತ್ರನಾಗಿದ್ದಾನೆ. ಬ್ರೋಕರ್ ಗಳಿಂದ ಮೋಸ ಹೋಗಿರುವ ಅಶೋಕ್  ವಿದೇಶದಿಂದ ಸ್ವದೇಶಕ್ಕೆ ವಾಪಾಸ್ ಬರಲಾಗದೆ ಬಂಧಿ ಆಗಿದ್ದಾರೆ. 

ಸುರಕ್ಷಿತವಾಗಿ ಭಾರತಕ್ಕೆ ಹಿಂದಿರುಗಿಸುವಂತೆ ಸಚಿವೆ ಆಗ್ರಹ

ಯುವಕನ ಪೋಷಕರು ಸೇರಿದಂತೆ ಕುಟುಂಬಸ್ಥರು, ಗ್ರಾಮಸ್ಥರು ಬಾಳೆಹೊನ್ನೂರು ಠಾಣೆಗೆ ದೂರು ಸಲ್ಲಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಂದನೆ ನೀಡಿದ್ದು ದೂರದ ವಿದೇಶದಿಂದ ಕರೆ ತರುವ ಪ್ರಯತ್ನವನ್ನು ನಡೆಸಿದ್ದಾರೆ. ಕಾಂಬೋಡಿಯ ಅಧಿಕಾರಿಗಳಿಗೆ ಪತ್ರ ವ್ಯವಹಾರ ಮಾಡಿರುವ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ,ಅಶೋಕ್ ನನ್ನು ಸುರಕ್ಷಿತವಾಗಿ ಭಾರತಕ್ಕೆ ಹಿಂದಿರುಗಿಸುವಂತೆ ಸಚಿವೆ ಆಗ್ರಹಿಸಿದ್ದಾರೆ. ಒಟ್ಟಾರೆಯಾಗಿ ಕೆಲಸದ ಆಸೆಗಾಗಿ ತೆರಳಿದ ಗ್ರಾಮೀಣ ಯುವಕ ವಂಚನೆ ಜಾಲಕ್ಕೆ ಬಲಿಯಾಗಿ ತೊಂದರೆಗೆ ಸಿಲುಕಿದ್ದಾನೆ. ಮೊದಲೇ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ  ಸುರೇಶ್ ಕುಟುಂಬಕ್ಕೆ ಮಗನ ಸ್ಥಿತಿ ದೊಡ್ಡ ಆಘಾತವನ್ನೇ ನೀಡಿದೆ. ವಂಚನೆಯ ಜಾಲದಲ್ಲಿ ಸಿಲುಕಿಕೊಂಡಿರುವ ಅಶೋಕನನ್ನು ಕರೆತರುವ ಪ್ರಯತ್ನವನ್ನು ಕೇಂದ್ರಸಚಿವೆ ಶೋಭಾ ಕರಂದ್ಲಾಜೆ ಮಾಡಿದ್ದು ಅದು ಎಷ್ಟರಮಟ್ಟಿಗೆ ಫಲನೀಡಲಿದ ಅನ್ನೋದನ್ನು ಕಾದು ನೋಡಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ