ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

KPSC ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಸೆ.30 ಕೊನೆಯ ದಿನ

Twitter
Facebook
LinkedIn
WhatsApp
KPSC ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಸೆ.30 ಕೊನೆಯ ದಿನ

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 230 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ (RPC) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 30, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸೆಪ್ಟೆಂಬರ್ 1 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಲೋಕ ಸೇವಾ ಆಯೋಗ
ಹುದ್ದೆ ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ (RPC)
ಒಟ್ಟು ಹುದ್ದೆ230
ವಿದ್ಯಾರ್ಹತೆಪದವಿ
ವೇತನಮಾಸಿಕ ₹ 33,450-62,600
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಸೆಪ್ಟೆಂಬರ್ 30, 2023 (ನಾಳೆ)


ಉಳಿಕೆ ಮೂಲವೃಂದದ ಗ್ರೂಪ್ ‘ಸಿ’ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರವೀಕ್ಷಕರ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ
PH/ ವಿಧವಾ ಅಭ್ಯರ್ಥಿಗಳು- 10 ವರ್ಷ

ಅರ್ಜಿ ಶುಲ್ಕ:
SC/ST/ ಪ್ರವರ್ಗ-1 & PH ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳು- 50 ರೂ.
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ.
ಸಾಮಾನ್ಯ ಅಭ್ಯರ್ಥಿಗಳು- 600 ರೂ.
ಪಾವತಿಸುವ ಬಗೆ- ಆನ್​ಲೈನ್

ವೇತನ:
ಮಾಸಿಕ ₹ 33,450-62,600


ಉದ್ಯೋಗದ ಸ್ಥಳ:
ಕರ್ನಾಟಕ


ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 30, 2023
ಕನ್ನಡ ಭಾಷಾ ಪರೀಕ್ಷೆ ನಡೆಯುವ ದಿನಾಂಕ: ನವೆಂಬರ್ 4, 2023
ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನ: ನವೆಂಬರ್ 5, 2023


ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ.
ಕೇಂದ್ರ ಕಚೇರಿ ಮಾಹಿತಿ ಕೇಂದ್ರ ಮತ್ತು ಸಹಾಯವಾಣಿ ಸಂಖ್ಯೆ: 080-30574957/30574901
ಪ್ರಾಂತೀಯ ಕಛೇರಿ ಮೈಸೂರು: 0821-2545956
ಪ್ರಾಂತೀಯ ಕಛೇರಿ ಬೆಳಗಾವಿ: 0831-2475345
ಪ್ರಾಂತೀಯ ಕಛೇರಿ ಕಲಬುರಗಿ: 08472-227944
ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ