ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆಗೆ ಮಾರ್ಗಸೂಚಿ ಪ್ರಕಟ!

Twitter
Facebook
LinkedIn
WhatsApp
ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆಗೆ ಮಾರ್ಗಸೂಚಿ ಪ್ರಕಟ!

ಮಂಗಳೂರು ಸೆಪ್ಟೆಂಬರ್ 02 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಗರ ಪೊಲೀಸ್ ಕಮಿಷನರ್ ಮಾರ್ಗಸೂಚಿ ಹೊರಡಿಸಿದ್ದಾರೆ.

ಕಾರ್ಯಕ್ರಮ ಆಯೋಜಿಸುವವರು ಕಡ್ಡಾಯವಾಗಿ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕು. ಮಡಕೆಗಳನ್ನು 14 ಅಡಿ ಎತ್ತರದವರೆಗೆ ಮಾತ್ರ ಕಟ್ಟಬೇಕು. ಮಡಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಟ್ಟಬಾರದು. ಮಡಕೆ ಒಡೆಯುವ ಸ್ವಯಂಸೇವಕರ ಮೇಲೆ ತಂಪು ನೀರನ್ನು ಚೆಲ್ಲಬಾರದು ಎಂಬ ಬಗ್ಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್ ಜೈನ್, ಶ್ರೀಕೃಷ್ಣ ಜನ್ಮಾಷ್ಟಮಿ ಸಾಂಪ್ರದಾಯಿಕವಾಗಿ ಆಚರಿಸುವುದರೊಂದಿಗೆ ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಮಾರ್ಗಸೂಚಿ ನೀಡಲಾಗಿದ್ದು, ಸಂಘಟಕರು ಈ ಬಗ್ಗೆ ಗಮನಹರಿಸಬೇಕು. ಪೊಲೀಸ್‌ ಇಲಾಖೆಯಿಂದ ನೀಡಲಾದ ಪರವಾನಗಿಯಲ್ಲಿ ನಿಗದಿಪಡಿಸಿದ ಸಮಯದವರೆಗೆ ಮಾತ್ರ ಧ್ವನಿವರ್ಧಕ ಬಳಸಬೇಕು. ಡಿ.ಜೆ. ಬಳಸಲು ಅವಕಾಶವಿಲ್ಲ. ಸುರಕ್ಷತೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಸ್ಫಷ್ಟಪಡಿಸಿದ್ದಾರೆ.

  • ಮಡಕೆಗಳನ್ನು ಕಟ್ಟುವಾಗ ಸಾರ್ವಜನಿಕ ವಾಹನ ಸಂಚಾರಕ್ಕೆ ಅಡ್ಡಿಯಾಗಬಾರದು.
  • ಪೊಲೀಸ್‌ ಇಲಾಖೆಯಿಂದ ಅಂತಿಮಗೊಳಿಸಲಾದ ರೂಟ್‌ನಲ್ಲಿ ಮಾತ್ರ ಮೆರವಣಿಗೆ ಸಾಗಬೇಕು.
  • ಮಡಕೆ ಕಟ್ಟುವಾಗ, ಸ್ತಬ್ಧಚಿತ್ರ ತಯಾರಿಸುವಾಗ ಸ್ಥಳದಲ್ಲಿ ಹಾದುಹೋಗಿರುವ ವಿದ್ಯುತ್‌ ತಂತಿ ಬಗ್ಗೆ ಎಚ್ಚರಿಕೆ ವಹಿಸಬೇಕು. ಮೆರವಣಿಗೆಯಲ್ಲಿ ಒಂದು ಸುಸಜ್ಜಿತ ಆ್ಯಂಬುಲೆನ್ಸ್‌ ವ್ಯವಸ್ಥೆಗೊಳಿಸಬೇಕು.
  • ಸುಪ್ರೀಂಕೋರ್ಟ್‌ ಆದೇಶದಂತೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಬೇಕು. ಅನಂತರ ಸುಡುಮದ್ದು/ಪಟಾಕಿಗಳನ್ನೂ ಬಳಸುವಂತಿಲ್ಲ.
  • ಫಿಟ್‌ನೆಸ್‌ ಸರ್ಟಿಫಿಕೇಟ್‌, ಇನ್ಶೂರೆನ್ಸ್‌ ಸರ್ಟಿಫಿಕೇಟ್‌ ಇರುವ ವಾಹನಗಳಲ್ಲಿ ಮಾತ್ರ ಸ್ತಬ್ಧ ಚಿತ್ರವನ್ನು ಅಳವಡಿಸಬೇಕು. ಸ್ವಯಂಸೇವಕರನ್ನು ಗುಂಪುಗಳಾಗಿ ವಿಂಗಡಿಸಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ನಿಯೋಜಿಸಿ ಮೆರವಣಿಗೆಯು ಸುಲಲಿತವಾಗಿ ಸಾಗುವಂತೆ ಮಾಡಬೇಕು.
  • ಯಾವುದೇ ಧರ್ಮ, ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವಂತಹ ಟ್ಯಾಬ್ಲೋ, ನೃತ್ಯರೂಪಕ ಇರಬಾರದು.
  • ಆಸ್ಪತ್ರೆಗಳ ಬಳಿ, ಜನಸಂದಣಿಯ ಮಧ್ಯೆ ಸುಡುಮದ್ದು ಬಳಸಬಾರದು.
  • ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ಅಳವಡಿಸುವ ಪೂರ್ವದಲ್ಲಿ ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು.
  • ಯಾವುದೇ ಪ್ರಚೋದನಾತ್ಮಕ ಬರಹಗಳು, ಚಿತ್ರಗಳನ್ನು ಬಳಸಬಾರದು. ಕಾರ್ಯಕ್ರಮ ಮುಗಿದ ಕೂಡಲೇ ಸಂಘಟಕರೇ ಕಡ್ಡಾಯವಾಗಿ ತೆರವುಗೊಳಿಸಬೇಕು.
ಮಂಗಳೂರು ಸಿಟಿ ಬಸ್ ನಿರ್ವಾಹಕ ಸಾವಿನ ಬಳಿಕ ಎಚ್ಚೆತ್ತ ಬಸ್ ಮಾಲಕರರಿಂದ ಜಾಗೃತಿ ಅಭಿಯಾನ..!

ಮಂಗಳೂರು: ಕೆಲ ದಿನಗಳ ಹಿಂದೆ ಮಂಗಳೂರು ನಗರದಲ್ಲಿ ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ದಾರುಣವಾಗಿ ಮೃತಪಟ್ಟ ಬಳಿಕ ಎಚ್ಚೆತ್ತ  ಬಸ್ ಮಾಲಕರು ಮತ್ತು ಪೊಲೀಸ್ ಅಧಿಕಾರಿಗಳು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿ ಕೊಂಡಿದ್ದಾರೆ.

ಇಂದು ಬೆಳಗ್ಗೆ ಮಂಗಳೂರು ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಸುರಕ್ಷ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ  ಜಾಗೃತಿ ಮೂಡಿಸಿದರು.

ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್ಸು ನಿರ್ವಾಹಕರಿಗೆ ನೀಡಿ ಗಂಭೀರತೆಯನ್ನು  ಮನವರಿಕೆ ಮಾಡಲಾಯಿತು.

ನಿರ್ವಾಹಕ ಸಹಿತ ಯಾರೂ ಬಸ್ಸಿನ ಫೂಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ,

ಪ್ರತಿಯೊಬ್ಬ ಪ್ರಯಾಣಿಕನಿಗೂ ನಿರ್ವಾಹಕ ಟಿಕೆಟ್ ನೀಡಬೇಕು ಜೊತೆಗೆ ಚಲೋ ಕಾರ್ಡ್‌ಗಳನ್ನು ಯಾವುದೇ ಕಾರಣಕ್ಕೂ  ತಿರಸ್ಕರಿಸುವಂತಿಲ್ಲ,

ಪ್ರಯಾಣಿಕರೊಂದಿಗೆ  ಬಸ್‌ ಸಿಬಂದಿಗಳು ಸೌಜನ್ಯದಿಂದ ವರ್ತಿಸಬೇಕು,

ಕರ್ಕಶ ಹಾರ್ನ್, ಮ್ಯೂಸಿಕ್ ಸಿಸ್ಟಂ ಬಳಸುವಂತಿಲ್ಲ ಮೊದಲಾದ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಹಕರಿಗೆ ನೀಡಿ .

ಗಂಭೀರತೆಯನ್ನು  ಮನವರಿಕೆ ಮಾಡಲಾಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist