ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿಗಳ ಕಳೆದ ಸಾಲಿನ ಬಸ್ ಪಾಸ್ ಜೂನ್ 15 ರ ವರೆಗೆ ವಿಸ್ತರಿಸಿದ ಕೆಎಸ್ಆರ್ ಟಿಸಿ!

Twitter
Facebook
LinkedIn
WhatsApp
Untitled 32

ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಕೆಎಸ್​ಆರ್​​ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ (Students Bus Pass) ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಇಂದು(ಮೇ 31) ಕೆಎಸ್​ಆರ್​​ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್​ಆರ್​​ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.

ಬೇಸಿಗೆ ರಜೆ ಅಂತ್ಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಶಾಲೆ ಪ್ರಾರಂಭವಾಗಿವೆ. ಇನ್ನು ಶಾಲೆಗೆ ಮಕ್ಕಳನ್ನು ಬರಮಾಡಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಕೆಲ ಮಾರ್ಗಸೂಚನೆಗಳನ್ನು ನೀಡಿದೆ. ಪ್ರಾರಂಭೋತ್ಸವ ನಡೆಸಿ ಮೊದಲ ದಿನ ಮಕ್ಕಳನ್ನು ಬರಮಾಡಿಕೊಳ್ಳಬೇಕು.

ಅಂದು ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಮೊದಲ ದಿನವೇ ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಇಲಾಖೆ ಸೂಚಿಸಿದೆ. ಒಂದು ವೇಳೆ ಮಳೆಯಿಂದಾಗಿ ಮಕ್ಕಳು ಶಾಲೆಗೆ ಬರಲು ತೊಂದರೆಯಾಗುತ್ತಿದ್ದರೆ ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ರಜೆ ಘೋಷಿಸಬೇಕು ಎಂದು ಶಿಕ್ಷಣ ಇಲಾಖೆ ತನ್ನ ಸುತ್ತೋಲೆಯಲ್ಲಿ ಸೂಚಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ