KSRTC ಬಸ್ ಚಾಲಕನ ನಿರ್ಲಕ್ಷ್ಯ; ಫುಡ್ ಡೆಲಿವರಿ ಬಾಯ್ ಸ್ಪಾಟ್ ಡೆತ್..!
ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗದ ಬಸ್ ಚಾಲನೆಗೆ ಫುಡ್ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಸವಾರಾಜು ಮೃತ ಫುಡ್ ಡೆಲಿವರಿ ಬಾಯ್. ತಡರಾತ್ರಿ 2 ಗಂಟೆ ವೇಳೆ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗ ಈ ಅಪಘಾತ ಸಂಭವಿಸಿದೆ. ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೈಸೂರು ರೋಡ್ ಕಡೆಗೆ ರಾತ್ರಿ ಫುಡ್ ಡೆಲಿವರಿ ಮಾಡಲು ಬಸವರಾಜು ತೆರಳುತ್ತಿದ್ದ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಬಸವರಾಜು ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಚಾಲಕನನ್ನ ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ತಂದೆ, ಮಗು ಸ್ಥಳದಲ್ಲೇ ಸಾವು, ಮಹಿಳೆ ಗಂಭೀರ
ನೆಲಮಂಗಲ: ಎರಡು ಬೈಕ್‌ಗಳ (Bike) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ (Nelamangala) ನಡೆದಿದೆ.
ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಭೀಕರ ಅಪಘಾತದ ಪರಿಣಾಮ ತಂದೆ (Father) ಹಾಗೂ ನಾಲ್ಕು ವರ್ಷದ ಮಗು (Child) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಕ್ರಾಂತಿ ಹಬ್ಬವನ್ನು ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ (Bengaluru) ಬರುವಾಗ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭಿಸಿಲ್ಲ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.