ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Kukke Subramanya ChampaShashti: ಸುಬ್ರಹ್ಮಣ್ಯದಲ್ಲಿ ನಾಳೆ ಬೆಳಗ್ಗೆ ದೇವರ ದರ್ಶನ ಇಲ್ಲ

Twitter
Facebook
LinkedIn
WhatsApp
Kukke Subramanya ChampaShashti: ಸುಬ್ರಹ್ಮಣ್ಯದಲ್ಲಿ ನಾಳೆ ಬೆಳಗ್ಗೆ ದೇವರ ದರ್ಶನ ಇಲ್ಲ

2 ವರ್ಷ​ಗಳ ಬಳಿಕ ಎಡೆ​ಸ್ನಾ​ನಕ್ಕೆ ಅವ​ಕಾ​ಶ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮರಥೋತ್ಸವ ಸೇವೆಯಲ್ಲಿ ಭಕ್ತರಿಗೆ ಗರಿಷ್ಠ 100 ಸೇವಾ ರಶೀದಿಗಳನ್ನು ನೀಡಲು ಮತ್ತು ಸೇವಾರ್ಥಿಗಳಿಗೆ ವಸತಿ, ಊಟೋಪಚಾರ ವ್ಯವಸ್ಥೆ ಕಲ್ಪಿಸುವ ಕ್ರಮಕೈಗೊಳ್ಳಲಾಯಿತು.

ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನಲೆಯಲ್ಲಿ ನಿರ್ಬಂಧಿಸಲಾಗಿದ್ದ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲು ಸಮ್ಮತಿಸಲಾಯಿತು. ಚೌತಿ, ಪಂಚಮಿ, ಷಷ್ಠಿ ದಿನದಂದು ಮಧ್ಯಾಹ್ನ ಮಹಾಪೂಜೆ ಬಳಿಕ ಭಕ್ತಾದಿಗಳು ಸ್ವ-ಇಚ್ಛೆಯಿಂದ ಭಾಗವಹಿಸುವವರಿಗೆ ಜಿಲ್ಲಾಧಿಕಾರಿ ನಿರ್ದೇಶನವನ್ನು ಪಾಲಿಸಿಕೊಂಡು ಸೇವೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಬೀದಿ ಉರುಳು ಸೇವೆ ಮಾಡುವವರಿಗೆ ಲಕ್ಷ ದಿಪೋತ್ಸವ ದಿನದಂದು ರಾತ್ರಿ ರಥೋತ್ಸವದ ಬಳಿಕ ಸಂಜೆ ಗಂಟೆ 5ರಿಂದ ಬೆಳಗ್ಗೆ 6 ಗಂಟೆವರೆಗೆ ಅವಕಾಶ ನೀಡಲು ಸಲಹೆ ವ್ಯಕ್ತವಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಲೆಮಾರಿ ಜಾನುವಾರು ಹಾಗೂ ಬೀದಿ ನಾಯಿ, ಹುಚ್ಚು ನಾಯಿಗಳ ಹಾವಳಿ ವ್ಯಾಪಕವಾಗಿರುವ ಬಗ್ಗೆ ದೂರು ವ್ಯಕ್ತವಾಯಿತು. ಚಂಪಾಷಷ್ಠಿ ಮಹೋತ್ಸವ ಸುಸೂತ್ರವಾಗಿ ನಡೆಯಲು ಎಲ್ಲರ ಸಹಕಾರ ಬೇಕು ಎಂದು ಹೇಳಿದ ಜಿಲ್ಲಾಧಿಕಾರಿ ರವಿಕುಮಾರ್‌ ಅವರು ಜನತೆಗೆ ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ವಿಶೇಷವಾಗಿ ಕಲ್ಪಿಸಬೇಕು. ಎಲ್ಲೆಲ್ಲಿ ನೀರಿನ ವ್ಯವಸ್ಥೆ ಬೇಕೋ ಅಲ್ಲಿ ಕುಡಿಯುವ ನೀರು, ಮೋಬೈಲ್‌ ಶೌಚಾಲಯ ಕಲ್ಪಿಸುವಂತೆ ಸೂಚಿಸಿದರು. ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ಸುಳ್ಯ ತಹಸೀಲ್ದಾರ್‌ ಅನಿತಾಲಕ್ಷ್ಮೀ, ಕಡಬ ತಹಸೀಲ್ದಾರ್‌ ರಮೇಶ್‌ಬಾಬು, ಗ್ರಾ.ಪಂ.ಅಧ್ಯಕ್ಷೆ ಲಲಿತಾ ಕೆ. ಮತ್ತಿ​ತ​ರರು ಪಾಲ್ಗೊಂಡ​ರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ