ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುಮಾರಸ್ವಾಮಿ ಚುನಾವಣಾ ಅಫಿಡವಿಟ್‌ನಲ್ಲಿ 2ನೇ ಪತ್ನಿ ಮತ್ತು ಮಗಳ ವಿವರ ನೀಡದಿರುವ ಆರೋಪ ; ದೂರನ್ನು ರದ್ದುಪಡಿಸಿದ ಕೋರ್ಟ್!

Twitter
Facebook
LinkedIn
WhatsApp
ಕುಮಾರಸ್ವಾಮಿ ಚುನಾವಣಾ ಅಫಿಡವಿಟ್‌ನಲ್ಲಿ 2ನೇ ಪತ್ನಿ ಮತ್ತು ಮಗಳ ವಿವರ ನೀಡದಿರುವ ಆರೋಪ ; ದೂರನ್ನು ರದ್ದುಪಡಿಸಿದ ಕೋರ್ಟ್!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ತಮ್ಮ ಎರಡನೇ ಪತ್ನಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಮತ್ತು ಮಗಳು ಶರ್ಮಿಕಾಳ ಬಗ್ಗೆ ಚುನಾವಣಾ ಅಫಿಡವಿಟ್‌ನಲ್ಲಿ (Election Affidavit) ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಸಲ್ಲಿಸಲಾದ ದಾವೆಯನ್ನು ಬೆಂಗಳೂರಿನ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ವಜಾ ಮಾಡಿದೆ. ಚುನಾವಣಾ ನೀತಿ ನಿಯಮಗಳ (Election rules) ಪ್ರಕಾರ ಈ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಹೇಳಿದೆ.

ಕುಮಾರಸ್ವಾಮಿ ಅವರು ತಮ್ಮ ಉಮೇದುವಾರಿಕೆಯ ಜೊತೆ ತಪ್ಪು ಅಫಿಡವಿಟ್‌ ಸಲ್ಲಿಸಿದ್ದು, ಎರಡನೇ ಪತ್ನಿ ರಾಧಿಕಾ ಹಾಗೂ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಪುತ್ರಿ ಶರ್ಮಿಕಾ ಅವರ ಮಾಹಿತಿ ಬಚ್ಚಿಡುವ ಮೂಲಕ ಪ್ರಮಾದ ಎಸಗಿದ್ದಾರೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶಿಸುವಂತೆ ಕೋರಿ ಒಂದು ಖಾಸಗಿ ದೂರನ್ನು ದಾಖಲಿಸಲಾಗಿತ್ತು. ಅದನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಜೆ ಪ್ರೀತ್‌ ಅವರು ವಜಾ ಮಾಡಿದ್ದಾರೆ.

ದೂರಿನಲ್ಲಿ ಅರ್ಜಿದಾರರು ಹೇಳಿದ್ದೇನು?

2018ರ ಮೇನಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ಚುನಾವಣಾಧಿಕಾರಿಗೆ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಉಮೇದುವಾರಿಕೆ ಮತ್ತು ಅಫಿಡವಿಟ್‌ ದೋಷಪೂರಿತವಾಗಿವೆ. ಇದರಲ್ಲಿ ಕುಮಾರಸ್ವಾಮಿ ಅವರು ಎರಡನೇ ಪತ್ನಿ ರಾಧಿಕಾ, ಪುತ್ರ ನಿಖಿಲ್‌ ಮತ್ತು ಪುತ್ರಿ ಶರ್ಮಿಕಾ ಅವರ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾರೆ. ಹೀಗಾಗಿ, ಅವರ ವಿರುದ್ಧ ಐಪಿಸಿ ಸೆಕ್ಷನ್‌ 181 ಮತ್ತು ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್‌ 125ಎ ಅಡಿ ಕ್ರಮಕೈಗೊಳ್ಳಬೇಕು ಎಂದು ಖಾಸಗಿ ದಾವೆಯಲ್ಲಿ ಕೋರಲಾಗಿತ್ತು.

ಈ ದಾವೆಗೆ ನ್ಯಾಯಾಲಯ ಹೇಳಿದ್ದೇನು?
  1. ಯಾವುದೇ ದಾಖಲೆ ಸಲ್ಲಿಸದೇ ರಾಧಿಕಾ ಅವರು ಕುಮಾರಸ್ವಾಮಿ ಅವರ ಎರಡನೇ ಪತ್ನಿ ಎಂದು ದೂರುದಾರರು ಹೇಳುವುದನ್ನು ಆಧರಿಸಿ ಈ ಹಂತದಲ್ಲಿ ನ್ಯಾಯಾಲಯವು ಕುಮಾರಸ್ವಾಮಿ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶಿಸಲಾಗದು.
  2. ಮೊದಲ ಪತ್ನಿ ಜೀವಂತವಾಗಿರಬೇಕಾದರೆ ಹಾಲಿ ಕಾನೂನಿನಲ್ಲಿ ಎರಡನೇ ಪತ್ನಿ ಪರಿಕಲ್ಪನೆಗೆ ಅವಕಾಶವಿಲ್ಲ.
  3. ಕುಮಾರಸ್ವಾಮಿ ಅವರು ರಾಧಿಕಾ, ನಿಖಿಲ್‌ ಮತ್ತು ಶರ್ಮಿಕಾ ಅವರ ಬಗ್ಗೆ ಮಾಹಿತಿ ಬಚ್ಚಿಟ್ಟಿದ್ದಾರೆ ಎಂಬುದು ದೂರುದಾರರ ವಾದವಾಗಿದೆ. ಆದರೆ, ದೂರುದಾರರು ಅನಿತಾ ಅವರು ಕುಮಾರಸ್ವಾಮಿ ಅವರ ಪತ್ನಿ ಎಂಬುದಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ.
  4. ಕುಮಾರಸ್ವಾಮಿ ಅವರು ಉಮೇದುವಾರಿಕೆ ಅಂದರೆ ಫಾರ್ಮ್‌ 26ರಲ್ಲಿ ಪತ್ನಿ ಕಾಲಂನಲ್ಲಿ ಅನಿತಾ ಅವರನ್ನು ಪತ್ನಿ ಎಂದು ಹೇಳಿದ್ದಾರೆ. ಆದರೆ, ರಾಧಿಕಾ ಅವರು ಕುಮಾರಸ್ವಾಮಿ ಅವರ ಪತ್ನಿ ಅಥವಾ ಎರಡನೇ ಪತ್ನಿ ಎಂದು ತೋರಿಸಲು ಯಾವುದೇ ದಾಖಲೆ ಸಲ್ಲಿಸಲಾಗಿಲ್ಲ.
  1. ಕುಮಾರಸ್ವಾಮಿ ಅವರು ತಮ್ಮ ಅಫಿಡವಿಟ್‌ನಲ್ಲಿ ಯಾವುದೇ ಸುಳ್ಳು ಮಾಹಿತಿ ನೀಡಿಲ್ಲ. ದೂರಿನ ಪ್ರಕಾರ ನೋಡಿದರೆ ಕುಮಾರಸ್ವಾಮಿ ಅವರು ಪತ್ನಿ ರಾಧಿಕಾ ಮತ್ತು ಮಕ್ಕಳ ಮಾಹಿತಿ ನೀಡಿಲ್ಲ. ತಪ್ಪು ಹೇಳಿ ಅಥವಾ ಮಾಹಿತಿ ಬಹಿರಂಗಪಡಿಸದಿರುವುದು ಬೇರೆಬೇರೆ ವಿಚಾರಗಳಾಗಿವೆ. ಹೀಗಾಗಿ, ಕುಮಾರಸ್ವಾಮಿ ಅವರು ಐಪಿಸಿ ಸೆಕ್ಷನ್‌ 181ರ ಅಡಿ ಯಾವುದೇ ಅಪರಾಧ ಎಸಗಿಲ್ಲ.
  2. ಫಾರ್ಮ್‌ 26ರಲ್ಲಿ ಅಭ್ಯರ್ಥಿಯ ಮಕ್ಕಳ ಕುರಿತಾದ ಮಾಹಿತಿಗೆ ಸಂಬಂಧಿಸಿದ ಅಂಶ ಇಲ್ಲ. ಪತ್ನಿ, ಆಕೆಯ ಆಸ್ತಿ ಮತ್ತು ಇತರ ಅಂಶಗಳನ್ನು ಹೊರತುಪಡಿಸಿ ಮಕ್ಕಳ ಮಾಹಿತಿ ಕೋರಲಾಗಿಲ್ಲ.
  3. ಫಾರ್ಮ್‌ 26ರಲ್ಲಿ ಏನು ಮಾಹಿತಿ ಕೋರಲಾಗಿದೆಯೋ ಆ ಮಾಹಿತಿಯನ್ನಷ್ಟೇ ಅಭ್ಯರ್ಥಿ ನೀಡಬೇಕು. ಕುಮಾರಸ್ವಾಮಿ ಅವರು 2018ರ ಏಪ್ರಿಲ್‌ 19ರಂದು ಫಾರ್ಮ್‌ 26 ಅನ್ನು ಸಲ್ಲಿಸಿದ್ದು, ಇದನ್ನೇ ದೂರುದಾರರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
  4. ಕುಮಾರಸ್ವಾಮಿ ಅವರು ಮಗ/ಮಗಳು/ಮಕ್ಕಳ ಬಗ್ಗೆ ಮಾಹಿತಿ ನೀಡಬೇಕಿಲ್ಲ. ಹೀಗಾಗಿ, ಇದು ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್‌ 125ಎ ಅಡಿ ಅಪರಾಧವಾಗುವುದಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist