ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು; ಹೆಚ್. ಡಿ ದೇವೇಗೌಡ..!
ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು. ಕೇಸರಿ ಬದಲು ನಮ್ಮ ಪಕ್ಷದ ಶಾಲು ಧರಿಸಬಹುದಿತ್ತು. ನಾಳೆ ನರೇಂದ್ರ ಮೋದಿ ಜತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ (Hanuman Flag) ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಪ್ರತಿಭಟನೆ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಕೇಸರಿ ಶಾಲು (saffron shawl) ಧರಿಸಬಾರದಿತ್ತು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Devegowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಮಾಜಿ ಪ್ರಧಾನಿ ಎಚ್ಡಿಡಿ ಕೇಸರಿ ಬದಲು ನಮ್ಮ ಪಕ್ಷದ ಶಾಲನ್ನು ಧರಿಸಬಹುದಿತ್ತು ನಾನು ಮಾತ್ರ ಎಲ್ಲೇ ಹೋದರೂ ನಮ್ಮ ಪಕ್ಷದ ಶಾಲನ್ನು ಧರಿಸುತ್ತೇನೆ ಎಂದು ಹೇಳಿದ್ದಾರೆ.
ಯಾರೋ ಬಂದು ಕೇಸರಿ ಶಾಲನ್ನು ಹಾಕಿರುತ್ತಾರೆ
ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು. ಕೇಸರಿ ಬದಲು ನಮ್ಮ ಪಕ್ಷದ ಶಾಲು ಧರಿಸಬಹುದಿತ್ತು. ನಾಳೆ ನಾನು ಪ್ರಧಾನಿ ನರೇಂದ್ರ ಮೋದಿ ಜತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ. ಪ್ರತಿಭಟನೆಯ ವೇಳೆ ಯಾರೋ ಬಂದು ಕೇಸರಿ ಶಾಲನ್ನು ಹಾಕಿರುತ್ತಾರೆ. ಆಯಾ ಸಂದರ್ಭಕ್ಕೆ ಹಾಕಿರುತ್ತಾರೆ, ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.