ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಬಹುತೇಕ ಖಚಿತ ; ಪರೋಕ್ಷವಾಗಿ ಸುಳಿವು ಕೊಟ್ಟ ಹೆಚ್ ಡಿ ಕುಮಾರಸ್ವಾಮಿ.!

Twitter
Facebook
LinkedIn
WhatsApp
ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಬಹುತೇಕ ಖಚಿತ ; ಪರೋಕ್ಷವಾಗಿ ಸುಳಿವು ಕೊಟ್ಟ ಹೆಚ್ ಡಿ ಕುಮಾರಸ್ವಾಮಿ.!

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ (BJP JDS Alliance)ತನ್ನ ಪಾಲಿನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಇಂದು (ಮಾರ್ಚ್ 26) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಹೆಸರುಗಳನ್ನು ಸಂಜೆ ಘೋಷಿಸುವುದಾಗಿ ಹೇಳಿದರು.

ಅಲ್ಲದೇ ಇದೇ ವೇಳೆ ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ತಲೆಕೊಡಲು ಸಿದ್ಧ ಎಂದು ಹೇಳಿದರು. ಈ ಮೂಲಕ ಮಂಡ್ಯದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಿದ್ದು, ಸಂಜೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಇದರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ಯಾರು ಯಾರು ಎನ್ನುವ ಕಾರ್ಯಕರ್ತರಿಗೆ ಕ್ಲಾರಿಟಿ ಸಿಕ್ಕಂತಾಗಿದೆ.

ಈ ಮೊದಲು ಮಂಡ್ಯದಲ್ಲಿ ಪುಟ್ಟರಾಜು ಅವರನ್ನು ಕಣಕ್ಕಿಳಿಸಬೇಕೆಂದು ತೀರ್ಮಾನ ಮಾಡಿದ್ವಿ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ಸಹ ಸ್ಪರ್ಧೆ ಮಾಡಲ್ಲ ಎಂದಿದ್ದಾನೆ. ಇನ್ನು ಜಿಲ್ಲೆಯ ಕಾರ್ಯಕರ್ತರು ನನ್ನನ್ನು ನಿಲ್ಲುವಂತೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಇಂದು (ಮಾರ್ಚ್ 26) ಸಂಜೆ ಮಂಡ್ಯ ಜಿಲ್ಲೆಯ ಮುಖಂಡರ ಸಭೆ ನಡೆಸಿ ಅಂತಿಮ ತೀರ್ಮಾನ ತಿಳಿಸುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಬಿಜೆಪಿ-JDS​ ಮೈತ್ರಿಯಿಂದ ನಾವು ಮೂರು ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ದೇಶಾದೆಲ್ಲೆಡೆ ಮೋದಿ ಅಲೆ ಇದೆ. ಹೀಗಾಗಿ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಸಂಜೆಯೊಳಗೆ ಕೋಲಾರ ಮೈತ್ರಿ ಅಭ್ಯರ್ಥಿ ಘೋಷಿಸುತ್ತೇವೆ. ರಾಮನಗರ ಜಿಲ್ಲೆ ನನಗೆ ರಾಜಕೀಯವಾಗಿ ಶಕ್ತಿ ಮತ್ತು ಜನ್ಮಕೊಟ್ಟಿದೆ. ಇನ್ನೂ 10 ಜನ್ಮ ಹುಟ್ಟಿ ಬಂದರೂ ರಾಮನಗರದಿಂದ ಕಳಿಸಲು ಆಗಲ್ಲ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು. ಈ ಮೂಲಕ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದ್ದು, ಸಂಜೆ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಮಾ.29ರಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ

ಚುನಾವಣೆಗೆ ಈಗಾಗಲೇ ಸ್ಟಾರ್​ ಪ್ರಚಾರಕರ ಪಟ್ಟಿ ಸಿದ್ಧಪಡಿಸಿದ್ದೇವೆ. ಅಲ್ಲದೇ ಬಿಜೆಪಿ-ಜೆಡಿಎಸ್ ನಡುವೆ​ ಸಮನ್ವಯಕ್ಕಾಗಿ ಸಭೆ ಕರೆದಿದ್ದೇವೆ. ಮಾ.29ರಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಭೆ ನಿಗದಿಯಾಗಿದೆ. ಎಂದರು.

ಇನ್ನು ನಾಳೆ (ಮಾರ್ಚ್ 27) ಸಂಜೆ 4 ಗಂಟೆಗೆ ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿಗಳ ಸಭೆ ಕರೆದಿದ್ದೇವೆ. ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರಗಳ ಪ್ರಚಾರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಿಜೆಪಿ, ಜೆಡಿಎಸ್​ನ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಕೇಂದ್ರದ ಬಳಿ ಇವರಿಗೆ ಸರಿಯಾಗಿ ಮನವಿ ಮಾಡೋದಕ್ಕೆ ಬರಲ್ಲ. ರಾಜ್ಯ ಸರ್ಕಾರ ತನ್ನ ಬಳಿಯೇ ನ್ಯೂನತೆ ಇಟ್ಟುಕೊಂಡಿದೆ/ ಕೇಂದ್ರ ನೀಡಿದ 3 ಸಾವಿರ ಕೋಟಿ ರೂಪಾಯಿ ಅನುದಾನ ಬಳಕೆ ಮಾಡಿಕೊಂಡಿಲ್ಲ ಎಂದು ಕಿಡಿಕಾರಿದರು.

ಗುಬ್ಬಿ ಶಾಸಕ ಶ್ರೀನಿವಾಸ್ ಬಳಸಿರುವ ಪದಗಳನ್ನು ನಾನು ಗಮನಿಸಿದ್ದೇನೆ. ನಾಡಿನ ರೈತರ ಹಿತಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಪ್ರಾದೇಶಿಕ ಜೆಡಿಎಸ್​ ಪಕ್ಷ ಅಧಿಕಾರಕ್ಕೆ ಬರಲಿಲ್ಲ. ನೆರೆ ರಾಜ್ಯಗಳಿಗೆ ಅನ್ಯಾಯವಾಗದಂತೆ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕರೆ ನೀಡಿದರು.

ಜಿ ಟಿ ದೇವೇಗೌಡರ ನೇತೃತ್ವದಲ್ಲಿ ಕೋರ್ ಕಮೀಟಿ ಸಭೆ ನಡೆದಿದ್ದು, ಇವತ್ತಿನ ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯ‌ ತಯಾರಿ ಬಗ್ಗೆ ಚರ್ಚೆ ಆಗಿದೆ. ಮೈತ್ರಿಯ ಎರಡು ಪಕ್ಷಗಳ ನಾಯಕರ ವಿಶ್ವಾಸದೊಂದಿಗೆ ಯಾವ ರೀತಿ ಚುನಾವಣೆಯಲ್ಲಿ ಭಾಗವಹಿಸಬೇಕಯ ಎಂದು ಚರ್ಚೆ ಮಾಡಿದ್ದೇವೆ. ಪ್ರಮುಖವಾಗಿ 6 ವಿಚಾರಗಳ ಕುರಿತು ಚರ್ಚ್ ನಟೆಸಿದ್ದೇವೆ. ಶಾಸಕರ ಎಲ್ಲರ ಒಳಗೊಂಡ ಸಮನ್ವಯ ಸಮಿತಿಯನ್ನ ಪ್ರಕಟ ಮಾಡಿದ್ದೇವೆ. ಚುನಾವಣೆ ಯಾವ ರೀತಿ ನಡೆಸಬೇಕು ಎಂದು ಪಕ್ಷದ ಮುಖಂಡರಿಗೆ ಹೇಳಿದ್ದೇವೆ. ಇವತ್ತು ವಿಷೇಶವಾಗಿ ಚರ್ಚೆ ಮಾಡಿದ್ದು, ತಮಿಳುನಾಡಿನ ಡಿಎಂಕೆ ಸರ್ಕಾರ ಪ್ರಣಾಳಿಕೆಯಲ್ಲಿ ಮೇಕೆದಾಟು ನಿಲ್ಲಿಸುತ್ತೇವೆ ಎಂದು ಹಾಕಿದ್ದಾರೆ. ಅದರ ಬಗ್ಗೆ ನಾವು ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ . ಪ್ರಣಾಳಿಕೆಯನ್ನು ಮಾಡಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ತಿರ್ಮಾನ ಇದೆ. ಆ ಕುರಿತು ಚರ್ಚೆ ಆಗಿದೆ ಎಂದು ಹೇಳಿದರು.

ಕೆಲವು ಸೂಕ್ಷ್ಮ ವಿಚಾರಗಳು ಇವೆ. ಎನ್ ಡಿ ಎ ಸರ್ಕಾರ ಇದೆ ಎಂಬುವುದು ನಮ್ಮ ವಿಶ್ವಾಸ. ಮೂರು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ನಮ್ಮ ಪ್ರಣಾಳಿಕೆ ಘೋಷಣೆ ಮಾಡಿದ್ರು ಗಂಭೀರವಾಗಿ ತೆಗೆದುಕೊಳ್ಳುವುದು ಕಷ್ಟ ಇದೆ. ನಮ್ಮ ಲೋಕಸಭಾ ಸದಸ್ಯರ ಮೇಲೆ ಕೆಲವು ರಾಜಕೀಯ ಹೇಳಿಕೆ ಗಮಿನಿಸಿದ್ದೇವೆ. 28 ಸದಸ್ಯರ ಇದ್ರು ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಕಾಂಗ್ರೆಸ್‌ ನಾಯಕರು ಅಪ ಪ್ರಚಾರ ಮಾಡಿದ್ದಾರೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist