Ladakh: ವಾಹನ ಕಮರಿಗೆ ಉರುಳಿ 9 ಸೇನಾ ಸಿಬ್ಬಂದಿ ಹುತಾತ್ಮ!
Ladakh: ಲಡಾಖ್ನ (Ladakh:) ಲೇಹ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಂದರಕ್ಕೆ ಉರುಳಿ ಬಿದ್ದಿದ್ದು ಒಂಬತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರ ಪೈಕಿ ಓರ್ವ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ) ಹಾಗೂ ಎಂಟು ಮಂದಿ ಸೈನಿಕರು ಎಂದು ತಿಳಿದುಬಂದಿದೆ. ಇನ್ನು ಅಪಘಾತದಲ್ಲಿ ಮತ್ತೊಬ್ಬ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಶನಿವಾರ ಸಂಜೆ 6:30 ರ ಸುಮಾರಿಗೆ ದಕ್ಷಿಣ ಲಡಾಖ್ನ ನ್ಯೋಮಾದಲ್ಲಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾರುತಿ ಜಿಪ್ಸಿ, ಟ್ರಕ್ ಮತ್ತು ಆಂಬ್ಯುಲೆನ್ಸ್ ಒಳಗೊಂಡ ಮೂರು ವಾಹನಗಳಲ್ಲಿ ಒಟ್ಟು ಮೂವರು ಅಧಿಕಾರಿಗಳು, ಇಬ್ಬರು ಜೆಸಿಒಗಳು ಮತ್ತು 34 ಜವಾನರು ಪ್ರಯಾಣಿಸುತ್ತಿದ್ದರು. ಸೇನಾ ವಾಹನದಲ್ಲಿ ಚಾಲಕ ಸೇರಿದಂತೆ 10 ಸೇನಾ ಸಿಬ್ಬಂದಿ ಲೇಹ್ನಿಂದ ನ್ಯೋಮಾಗೆ ಪ್ರಯಾಣಿಸುತ್ತಿದ್ದರು.
ಕೇಂದ್ರ ಸಚಿವ ಅಮಿತ್ ಶಾ (Union Minister Amit Shah) ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. “ಲಡಾಖ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ನಾವು ನಮ್ಮ ವೀರ ಸೈನಿಕರನ್ನು ಕಳೆದುಕೊಂಡಿದ್ದೇವೆ, ಅವರ ವಾಹನವು ಕಮರಿಗೆ ಬಿದ್ದಿದ್ದರಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಇಡೀ ರಾಷ್ಟ್ರವು ದುಃಖತಪ್ತ ಕುಟುಂಬಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಅವರಿಗೆ ನನ್ನ ಪ್ರಾಮಾಣಿಕ ಸಂತಾಪಗಳು. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳುತ್ತಾರೆ ಎಂದು ಅವರು ಟ್ವೀಟ್ನಲ್ಲಿ ಬರೆದಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ (Defence Minister Rajnath Singh) ಕೂಡ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. “ಲಡಾಖ್ನ ಲೇಹ್ ಬಳಿ ಅಪಘಾತದಿಂದಾಗಿ ಭಾರತೀಯ ಸೇನಾ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ದುಃಖವಾಗಿದೆ. ನಮ್ಮ ದೇಶಕ್ಕೆ ಅವರ ಆದರ್ಶ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡ ಸಿಬ್ಬಂದಿಯನ್ನು ಕ್ಷೇತ್ರ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಶೀಘ್ರ ಚೇತರಿಕೆ ಪ್ರಾರ್ಥಿಸುವೆ,”ಏಂದು ಅವರು ಟ್ವಿಟರ್ನಲ್ಲಿ ಬರೆದಿದ್ದಾರೆ