ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ ಪೇಟೆಯಲ್ಲಿ ದಿಡೀರ್ ಭೂಕುಸಿತ; ಟ್ರಾನ್ಸ್ಫಾರ್ಮರ್ ಧರೆಗೆ ಬಿದ್ದು ತಪ್ಪಿದ ಭಾರಿ ಅನಾಹುತ!

Twitter
Facebook
LinkedIn
WhatsApp
ಸುಳ್ಯ ಪೇಟೆಯಲ್ಲಿ ದಿಡೀರ್ ಭೂಕುಸಿತ; ಟ್ರಾನ್ಸ್ಫಾರ್ಮರ್ ಧರೆಗೆ ಬಿದ್ದು ತಪ್ಪಿದ ಭಾರಿ ಅನಾಹುತ!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ (Sullia) ಶುಕ್ರವಾರ ರಾತ್ರಿ ಏಕಾಏಕಿ ಭೂಕುಸಿತ (Landslide) ಸಂಭವಿಸಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಸುಳ್ಯ ಪೇಟೆಯಲ್ಲಿರುವ ‘ಪರಿವಾರಕಾನ ಉಡುಪಿ ಗಾರ್ಡನ್’ ಹೋಟೆಲ್ ಬಳಿ ಭೂಕುಸಿತ ಸಂಭವಿಸಿದೆ. ಭೂಕುಸಿತವಾದ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್​ಫಾರ್ಮರ್ ಇತ್ತು. ಭುಕುಸಿತವಾದ ಬೆನ್ನಲ್ಲೇ ಟ್ರಾನ್ಸ್​ಫಾರ್ಮರ್ ಧರಾಶಾಯಿಯಾಗಿದೆ. ಅದೃಷ್ಟವಶಾತ್ ವಿದ್ಯುತ್ ಕಂಬ ಹಾಗೂ ಟ್ರಾನ್ಸ್​ಫಾರ್ಮರ್ ಬೀಳುವ ಸಂದರ್ಭ ಪವರ್ ಕಟ್ ಆಗಿದ್ದ ಕಾರಣ ದುರಂತ ತಪ್ಪಿದೆ.

ದಿಢೀರ್ ಭೂಕುಸಿತವಾಗಿದ್ದರಿಂದ ಸುಳ್ಯದ ಜನತೆ ಬೆಚ್ಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಮೆಸ್ಕಾ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಂಬ ತೆರವುಗೊಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಭೂಕುಸಿತ ಉಂಟಾದ ಭಾಗಕ್ಕೆ ಯಾರೂ ಹೋಗದಂತೆ ತಡೆದಿದ್ದಾರೆ.

ಈ ಮಧ್ಯೆ, ಸುಳ್ಯವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ಮಳೆಯಾಗಿದೆ.

ನೆರೆಯ ಕೊಡಗು ಜಿಲ್ಲೆಯಲ್ಲಿಯೂ ಶುಕ್ರವಾರ ಸಂಜೆ ಹಾಗೂ ರಾತ್ರಿ ಭಾರೀ ಮಳೆಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ಸುತ್ತಮುತ್ತ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದೆ. ಮಡಿಕೇರಿ‌ ನಗರ, ಮೇಕೇರಿ, ಕಗ್ಗೋಡ್ಲು, ತಾಳತ್ಮನೆ ಸುತ್ತಮುತ್ತ ಮಳೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ