ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಂಕಾ 326ಕ್ಕೆ ಆಲೌಟ್: ದಕ್ಷಿಣ ಆಫ್ರಿಕಾಕ್ಕೆ 102 ರನ್‌ಗಳ ಭರ್ಜರಿ ಜಯ

Twitter
Facebook
LinkedIn
WhatsApp
ಲಂಕಾ 326ಕ್ಕೆ ಆಲೌಟ್: ದಕ್ಷಿಣ ಆಫ್ರಿಕಾಕ್ಕೆ 102 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ರನ್ ಮಳೆಯೇ ಸುರಿಯಿತು. ಭಾರೀ ಮೊತ್ತ ಪೇರಿಸಿದ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ 102 ರನ್ ಜಯ ಸಾಧಿಸಿತು.

ಶ್ರೀಲಂಕಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ದಕ್ಷಿಣ ಆಫ್ರಿಕಾ ಪರ ಮೂವರು ಅತ್ಯಮೋಘ ಶತಕ ಸಿಡಿಸಿ 428 ರನ್ ಗಳ ಮೊತ್ತ ಕಲೆ ಹಾಕಲು ಕಾರಣವಾದರು. ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್, ವನ್ ಡೌನ್ ಆಟಗಾರ ವ್ಯಾನ್ ಡರ್ ಡ್ಯೂಸನ್ ಮತ್ತು ಏಡನ್ ಮಾರ್ಕ್ರಮ್ ಶತಕಗಳನ್ನು ಬಾರಿಸಿದರು.

ಭಾರೀ ಮೊತ್ತದ ಗುರಿ ಬೆನ್ನಟ್ಟಿದ ಲಂಕಾ ಅಷ್ಟೇನೂ ಹಗುರವಾಗಿ ಪರಿಗಣಿಸದಂತೆ ಪ್ರದರ್ಶನ ತೋರಿ ಮುನ್ನೂರರ ಗಡಿ ದಾಟಿತು. 44.5 ಓವರ್ ಗಳಲ್ಲಿ 326 ರನ್ ಗಳಿಗೆ ಎಲ್ಲ ವಿಕೆಟ್ ಗಳನ್ನು ಕಳೆದು ಕೊಂಡಿತು. ಕುಸಾಲ್ ಮೆಂಡಿಸ್ 76, ಚರಿತ್ ಅಸಲಂಕಾ 79, ನಾಯಕ ದಸುನ್ ಶಣಕ 68 ರನ್ ಗಳಿಸಿ ಔಟಾದರು.ಸದೀರ ಸಮರವಿಕ್ರಮ 23, ಕಸುನ್ ರಜಿತಾ 33 ರನ್ ಗಳಿಸಿ ಔಟಾದರು

ಜೆರಾಲ್ಡ್ ಕೋಟ್ಜಿ 3,ಮಾರ್ಕೊ ಜಾನ್ಸೆನ್, ರಬಾಡ ಮತ್ತು ಕೇಶವ್ ಮಹಾರಾಜ್ ತಲಾ 2 ವಿಕೆಟ್ ಪಡೆದರು. ಸ್ಪೋಟಕ ಶತಕ ಸಿಡಿಸಿದ ಮಾರ್ಕ್ರಾಮ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ