ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

PSI ಅಮಾನತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ವಕೀಲರ ಪ್ರತಿಭಟನೆ..! ಏನಿದು ಪ್ರಕರಣ?

Twitter
Facebook
LinkedIn
WhatsApp
PSI ಅಮಾನತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ವಕೀಲರ ಪ್ರತಿಭಟನೆ..! ಏನಿದು ಪ್ರಕರಣ?

40 ವಕೀಲರ ವಿರುದ್ಧ ದೂರು ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ರಾಮನಗರದ ಐಜೂರು ಸರ್ಕಲ್ ಬಳಿ ಸುಮಾರು 300ಕ್ಕೂ ಹೆಚ್ಚು ವಕೀಲರಿಂದ ಪ್ರತಿಭಟನಾ ರ‍್ಯಾಲಿ ಮಾಡಲಾಗಿದೆ. ಪಿಎಸ್​ಐ ತನ್ವೀರ್ ಅಮಾನತಿಗೆ ಆಗ್ರಹಿಸಿ ರಾಮನಗರ ಜಿಲ್ಲಾಧಿಕಾರಿ ಕಚೇರಿವರೆಗೆ ವಕೀಲರ ಮೆರವಣಿಗೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಕೀಲರ ಪ್ರತಿಭಟನೆ ಮಾಡಿದ್ದು, ಡಿಸಿ ಊಟಕ್ಕೆ ಹೋಗಿದ್ದಾರೆ ಎಂದು ಸಿಬ್ಬಂದಿ ಹೇಳಿದ್ದಾರೆ. ನಾವು ಹಸಿದುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ಅದ್ಹೇಗೆ ಅವರು ಊಟ ಮಾಡುತ್ತಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಡಿಸಿ ಮತ್ತು ಎಸ್​ಪಿ ಊಟ ಬಿಟ್ಟು ಹೊರ ಬಂದಿದ್ದಾರೆ. ವಕೀಲರ ಮನವಿ ಸ್ವಿಕರಿಸಲು ಡಿಸಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್​ ಮತ್ತು ಎಸ್​ಪಿ ಕಾರ್ತಿಕ್ ರೆಡ್ಡಿ ಊಟ ಬಿಟ್ಟು ಬಂದಿದ್ದಾರೆ.

ಈ ವೇಳೆ ಮಾತನಾಡಿದ ಡಿಸಿ‌ಜಿಲ್ಲಾಧಿಕಾರಿ ಡಾ.ಅವಿನಾಶ್​ ತಪ್ಪು ಮಾಡಿದರೆ ತನಿಖೆ ಮಾಡಿ‌ ಕ್ರಮ ತಗೊಳ್ಳುತ್ತೇವೆ. ಅವರಿಗೆ ಒಂದು ಅವಕಾಶ ಮಾಡಿಕೊಡಿ ಎಂದಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿಗೆ 2 ಗಂಟೆಗಳ ಡೆಡ್​​ಲೈನ್​ ನೀಡಿದ ವಕೀಲರು, 2 ಗಂಟೆಯೊಳಗೆ ಒಂದು ನಿರ್ಧಾರಕ್ಕೆ ಬಂದು ಪಿಎಸ್​ಐ ಸಸ್ಪೆಂಡ್​ ಮಾಡುವಂತೆ ತಾಕೀತು ಮಾಡಿದ್ದಾರೆ. ಜೊತೆಗೆ ಗೃಹ ಸಚಿವರೂ ಸ್ಥಳಕ್ಕೆ ಬರಬೇಕು ಎಂದು ವಕೀಲರು ಪಟ್ಟುಹಿಡಿದ್ದಾರೆ. 5 ಗಂಟೆಯವರೆಗೆ ಇನ್ವೆಸ್ಟಿಗೇಷನ್ ಮಾಹಿತಿ ಪಡೆದುಕೊಳ್ಳುತ್ತೇನೆ. ಬಳಿಕ ನಿರ್ಧಾರವನ್ನು ತಿಳಿಸುತ್ತೇನೆ‌ ಎಂದು ಡಿಸಿ ಡಾ.ಅವಿನಾಶ್ ಹೇಳಿದ್ದಾರೆ.

ಎಸ್​ಪಿ ಕಾರ್ತಿಕ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಕಳೆದ ವಾರ ಬಾರ್ ಕೌನ್ಸಿಲ್ ಹಾಗೂ ಪದಾಧಿಕಾರಿ ಅರ್ಜಿ ಕೊಟ್ಟಿದ್ದಾರೆ. ಅದನ್ನು ನಾವು ತನಿಖೆ ಮಾಡುತ್ತಿದ್ದೇವೆ. ವಕೀಲರು ಕೊಟ್ಟ ಅರ್ಜಿಯನ್ನು ತನಿಖೆ ಮಾಡಲಾಗುತ್ತಿದೆ.

 

ವಕೀಲರ ಮೇಲೆ ದೂರು ವಿಚಾರವಾಗಿ 100% ವಾಸ್ತವಾಂಶವಾಗಿ ನಾವು ರಿಪೋರ್ಟ್ ಕೊಡುತ್ತೇವೆ ಎಂದಿದ್ದು, ಈ ವೇಳೆ ಕಾರ್ತಿಕ್ ರೆಡ್ಡಿ ಮಾತನ್ನು ವಕೀಲರು ಅಲ್ಲಗೆಳೆದಿದ್ದಾರೆ. ಕೂಡಲೇ ಸಸ್ಪೆಂಡ್ ಆಗಲೇಬೇಕು ಅಂತ ಪಟ್ಟ ಹಿಡಿದಿದ್ದಾರೆ.

ಮಂಡ್ಯ, ಮೈಸೂರು, ಆನೇಕಲ್, ಭದ್ರಾವತಿ ಸೇರಿದಂತೆ ಅನೇಕ ಕಡೆಯಿಂದ ವಕೀಲರು, ಮಹಿಳಾ ವಕೀಲರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಿದ್ದ ಎಸ್​ಡಿಪಿಐ ಕಾರ್ಯಕರ್ತ ಚಾಂದ್ ಪಾಷಾರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಇದಕ್ಕೆ ಪ್ರತಿಯಾಗಿ ಎಸ್​ಡಿಪಿಐ ಕಾರ್ಯಕರ್ತ ಚಾಂದ್ ಪಾಷಾರ ಕಡೆಯೊಬ್ಬರು ನೀಡಿದ್ದ ಸುಳ್ಳು ದೂರಿನ ಆಧಾರದ ಮೇಲೆ ಐಜೂರು ಪೊಲೀಸರು ವಕೀಲರ ಸಂಘದ 40 ವಕೀಲರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿತ್ತು. ಸದ್ಯ ಇದನ್ನು ಖಂಡಿಸಿ ವಕೀಲರಿಂದ ಪ್ರತಿಭಟನಾ ಮಾಡಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist