ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಾರ್ಟ್ ಟೈಮ್ ಕೆಲಸಕ್ಕೆಇಂಟರ್ ವ್ಯೂ ಇದೆ ಎಂದು ಹೊಟೇಲ್​ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ, ಉಪನ್ಯಾಸಕ ಅರೆಸ್ಟ್!

Twitter
Facebook
LinkedIn
WhatsApp

ಬೆಂಗಳೂರು, (ನವೆಂಬರ್ 14): ವಿದ್ಯಾರ್ಥಿನಿ(Student) ಮೇಲೆ ಲೈಂಗಿಕ ದೌರ್ಜನ್ಯ(sexual harassment) ಆರೋಪ ಮೇಲೆ ಬೆಂಗಳೂರಿನ ಗಂಗಮ್ಮನಗುಡಿ ಠಾಣೆ ಪೊಲೀಸರು ಖಾಸಗಿ ಕಾಲೇಜಿನ ಉಪನ್ಯಾಸಕನನ್ನು(college lecturer) ಬಂಧಿಸಿದ್ದಾರೆ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಲಹಂಕದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕ ಮದನ್ ಕುಮಾರ್ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಕೇಳಿದ್ದ ವಿದ್ಯಾರ್ಥಿನಿಯನ್ನು ಎಂಜಿ ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ಹೊಟೇಲ್ ಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಉಪನ್ಯಾಸಕ ಮದನ್ ಕುಮಾರ್ ಅವರ ಬಳಿ ಕೇಳಿಕೊಂಡಿದ್ದಾಳೆ. ಇದನ್ನೇ ಬಂಡವಾಳ ಮಾಡಿಕೊಂಡ ಉಪನ್ಯಾಸಕ ಮದನ್, ಎಂಜಿ ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ವಿದ್ಯಾರ್ಥಿನಿಯನ್ನು ಹೊಟೇಲ್ ಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದಾನೆ.  ಅಲ್ಲದೇ ವಿಡಿಯೋ ಮಾಡಿ ವಿದ್ಯಾರ್ಥಿನಿಗೆ ಬ್ಲಾಕ್ ಮೇಲ್ ಮಾಡಿದ್ದಾನೆ.

ಹೀಗೆ ಉಪನ್ಯಾಸಕನ ನಿರಂತರ ಲೈಂಗಿಕ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿ, ಕೊನೆಗೆ ಗಂಗಮ್ಮನಗುಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾಳೆ. ಇದೀಗ ಈ ದೂರಿನ ಮೇರೆಗೆ ಪೊಲೀಸರು ಉಪನ್ಯಾಸಕ ಮದನ್ ಕುಮಾರ್​ನನನ್ನು ಅರೆಸ್ಟ್ ಮಾಡಿದ್ದಾರೆ.

ಪಟಾಕಿ ಕಿಡಿಗೆ ಹೊತ್ತಿ ಉರಿದ ಗುಜರಿ ಅಂಗಡಿ, ರಾಯಚೂರಿನಲ್ಲಿ ನಾಲ್ಕೈದು ಕ್ವಿಂಟಲ್ ಹತ್ತಿ ಭಸ್ಮ

ರಾಯಚೂರು, ನ.14: ರಾಜ್ಯದೆಲ್ಲೆಡೆ ದೀಪಾವಳಿ ಹಬ್ಬದ (Deepavali) ಸಂಭ್ರಮ ಮನೆ ಮಾಡಿದೆ. ಪಟಾಕಿ (Fire Crackers) ಸಿಡಿಸಿ ಕೆಲವರು ಸಂಭ್ರಮಿಸಿದರೆ ಮತ್ತೆ ಕೆಲವೆಡೆ ಅದೇ ಪಟಾಕಿಗಳಿಂದ ಅನಾಹುತಗಳು ಸಂಭವಿಸಿವೆ. ದೀಪಾವಳಿ ಹಬ್ಬದಂದೇ ಸುಮಾರು ಮೂರುವರೆ ಲಕ್ಷ ಬೆಲೆ ಬಾಳೋ 4 ಎಲೆಕ್ಟ್ರಿಕ್ ಬೈಕ್​ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ನು ಮತ್ತೊಂದೆಡೆ ರಾಯಚೂರಿನಲ್ಲಿ ಕಿಡಿಗೇಡಿಗಳ ಪಟಾಕಿ ಕೃತ್ಯಕ್ಕೆ ಹತ್ತಿ ರಾಶಿ ಸುಟ್ಟು ಭಸ್ಮವಾಗಿದೆ. ರಾಯಚೂರು ತಾಲೂಕಿನ ತುರುಕನಡೋಣಿ ಗ್ರಾಮದಲ್ಲಿ ಲತಮ್ಮ ಅನ್ನೋ ರೈತ ಮಹಿಳೆಗೆ ಸೇರಿದ ಹತ್ತಿ ಭಸ್ಮವಾಗಿದೆ. ಹಬ್ಬದ ಸಂಭ್ರಮದಲ್ಲಿರಬೇಕಿದ್ದ ಲತಮ್ಮ ಅವರ ಬಾಳಿನಲ್ಲಿ ಕತ್ತಲು ಆವರಿಸಿದೆ.

ಹೊಲದಲ್ಲಿ ಬೆಳೆಯಲಾಗಿದ್ದ ಹತ್ತಿಯನ್ನು ಬಿಡಿಸಿ ಮನೆಯ ಮಾಳಿಗೆ ಮೇಲೆ ಸಂಗ್ರಹಿಸಲಾಗಿತ್ತು. ನಿನ್ನೆ ತಡ ರಾತ್ರಿ ಕಿಡಿಗೇಡಿಗಳು ಪಟಾಕಿಗೆ ಕಿಡಿ ಹೊತ್ತಿಸಿ ಹತ್ತಿಗೆ ಬೀಸಾಡಿರುವ ಶಂಕೆ ವ್ಯಕ್ತವಾಗಿದೆ. ಪಟಾಕಿ ಕಿಡಿ ತಗುಲಿ ನಾಲ್ಕೈದು ಕ್ವಿಂಟಲ್ ಹತ್ತಿ ಸುಟ್ಟು ಭಸ್ಮವಾಗಿದೆ. ಹೊಗೆ ಆವರಿಸುತ್ತಿದ್ದಂತೆ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ. ಲಕ್ಷಾಂತರ ರೂ.ಮೌಲ್ಯದ ಹತ್ತಿ ಸುಟ್ಟ ಹಿನ್ನೆಲೆ ಈ ಬಗ್ಗೆ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವಂತೆ ಲತಮ್ಮ ಆಗ್ರಹಿಸಿದ್ದಾರೆ.

ಪಟಾಕಿಯಿಂದ ಗುಜರಿ ಅಂಗಡಿಗೆ ಬೆಂಕಿ

ಇನ್ನು ಮತ್ತೊಂದೆಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಪಟಾಕಿಯಿಂದ ಗುಜರಿ ಅಂಗಡಿಗೆ ಬೆಂಕಿ ಹತ್ತುಕೊಂಡಿದೆ. ಮುಬಾರಕ್ ಎಂಬುವವರಿಗೆ ಸೇರಿದ ಗುಜುರಿ ಅಂಗಡಿಗೆ ಪಟಾಕಿ ಕಿಡಿ ಬಿದ್ದು ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಪಟಾಕಿಯ ಕಿಡಿ ಗುಜರಿ ಅಂಗಡಿ ಮೇಲೆ ಬಿದ್ದು ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಪಟಾಕಿಯಿಂದಲೇ ಕತ್ತಲಾಯ್ತು ಹಲವರ ಬದುಕು

ದೀಪಾವಳಿ ಹಬ್ಬದ ದಿನವೇ ಹಲವರ ಬದುಕು ಕತ್ತಲಾಗಿದೆ. ಬೆಂಗಳೂರಿನಲ್ಲಿ ಪಟಾಕಿ ಸಿಡಿಸಿದ ಹಲವರು ಕಣ್ಣು ಕಳೆದುಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಪಟಾಕಿ ಸಿಡಿಸುವ ವೇಳೆ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಯಾಗಿದೆ. ಇದರಲ್ಲಿ 13 ಮಂದಿ ಮಕ್ಕಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರು ಸಿಡಿಸಿದ ಪಟಾಕಿಯಿಂದಲೇ 12 ಮಂದಿಗೆ ಗಾಯವಾಗಿದೆ. ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist