ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

382 ಅಪರಾಧ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗಿನ ‘ಲಿಯೋ’ ಮರಣ...!

Twitter
Facebook
LinkedIn
WhatsApp
382 ಅಪರಾಧ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗಿನ ‘ಲಿಯೋ’ ಮರಣ...!

ಮಡಿಕೇರಿ: ಸುಮಾರು 382 ಅಪರಾಧ ಪ್ರಕರಣಗಳಲ್ಲಿ ಪೊಲೀಸರ ಜೊತೆ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗು ಜಿಲ್ಲಾ ಪೊಲೀಸ್ ಘಟಕದ ಶ್ವಾನ ದಳ ವಿಭಾಗದ ‘ಲಿಯೋ’ ಮೃತಪಟ್ಟಿದೆ.

2013 ಫೆಬ್ರವರಿ 26ರಿಂದ‌ ಕೊಡಗು ಪೊಲೀಸರ ಜೊತೆ ಸೇವೆ ಸಲ್ಲಿಸಲು ಆರಂಭಿಸಿದ ಲಿಯೋ ಒಟ್ಟು 10 ವರ್ಷ 9 ತಿಂಗಳ ಕಾಲ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ 2023 ನ.17 ರಂದು ರಂದು ಸೇವೆಯಿಂದ ನಿವೃತ್ತಿಯನ್ನು ಹೊಂದಿತ್ತು.

ತನ್ನ ಸೇವಾ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆಯಲ್ಲಿ ವರದಿಯಾದ ಕ್ಲಿಷ್ಟಕರ ಪ್ರಕರಣಗಳ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿತ್ತು.

ಒಟ್ಟು 382 ಅಪರಾಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಲಿಯೋ 46 ಅಪರಾಧಿಗಳನ್ನು ಪತ್ತೆ ಮಾಡಿದೆ. 22 ಪ್ರಕರಣಗಳಲ್ಲಿ ಅಪರಾಧಿಗಳ ಸುಳಿವು ನೀಡಿದೆ. ಅಲ್ಲದೆ, 2018 ನೇ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಭೂಕಸಿತದಿಂದ ನಾಪತ್ತೆಯಾದ ನಾಲ್ವರ ಮೃತ ದೇಹಗಳನ್ನು ಪತ್ತೆ ಮಾಡಿತ್ತು.

ಮಾತ್ರವಲ್ಲದೆ, ಚೆಕ್ ಪೋಸ್ಟ್‌ಗಳಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಪ್ರಕರಣವನ್ನು ಬಯಲಿಗೆಳೆದಿದೆ.
ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 3 ಬಾರಿ ಹಾಗೂ ವಲಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 4 ಬಹುಮಾನವನ್ನು ಗೆದ್ದಿತ್ತು.

ಕಾಫಿನಾಡಿನಲ್ಲಿ 6 ದಿನ ಟೂರಿಸ್ಟ್, 3 ದಿನ ಎಣ್ಣೆ ಬಂದ್
– ಇಂದಿನಿಂದ 6 ದಿನ ಮುಳ್ಳಯ್ಯನಗಿರಿ ಬಂದ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಆರು ದಿನ ಟೂರಿಸ್ಟ್, ಮೂರು ದಿನ ಎಣ್ಣೆ ಬಂದ್ ಮಾಡಲಾಗುತ್ತಿದೆ. ಅಲ್ಲದೆ ಇಂದಿನಿಂದ 6 ದಿನಗಳ ಕಾಲ ಮುಳ್ಳಯ್ಯನಗಿರಿಗೆ (Mullayanagiri Peak) ಪ್ರವೇಶ ಕೂಡ ಬಂದ್ ಮಾಡಲಾಗುತ್ತಿದೆ.

ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಗೆ ನಿರ್ಬಂಧ ಹೇರಲಾಗಿದೆ. ದತ್ತಜಯಂತಿ (Dattajayanthi) ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತಗಳ ಸಾಲಿನ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗುತ್ತಿದೆ.

ಇಂದಿನಿಂದ ಡಿಸೆಂಬರ್ 27ರ ಬುಧವಾರ ಸಂಜೆವರೆಗೆ ಎಲ್ಲಾ ಪ್ರವಾಸಿಗರಿಗೆ (Tourist) ಸಂಪೂರ್ಣ ನಿರ್ಬಂಧ ಹೇರಲಾಗುತ್ತಿದೆ. ಹೋಂಸ್ಟೇ, ರೆಸಾರ್ಟ್ ಗೆ ಬುಕ್ ಮಾಡಿದ್ದರೆ ಬರಬಹುದು, ತೊಂದರೆ ಇಲ್ಲ. ಆದರೆ ಪ್ರವಾಸಿ ತಾಣಗಳಿಗೆ ಹೋಗುವಂತಿಲ್ಲ, ಹೋಂ ಸ್ಟೇ, ರೆಸಾರ್ಟ್‍ನಲ್ಲೇ ಇರಬೇಕು.

ಸದ್ಯ ಪ್ರವಾಸಿಗರ ನಿರ್ಬಂಧದಿಂದ ಸ್ಥಳೀಯರಿಗೆ ಕೊರೊನಾ ಆತಂಕ ದೂರವಾಗಿದೆ. ಮುಳ್ಳಯ್ಯನಗಿರಿ ಭಾಗಕ್ಕೆ ರಾಜ್ಯ-ಕೇರಳದಿಂದ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ ಇದೀಗ ಚಂದ್ರದ್ರೋಣ ಪರ್ವತಗಳ ಸಾಲು ಒಂದು ವಾರ ಸಂಪೂರ್ಣ ಬಂದ್ ಹಾಗೂ ದತ್ತಜಯಂತಿಯ ಕಡೇ ದಿನ 5 ತಾಲೂಕುಗಳಾದ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರಗಳಲ್ಲಿ ಎಣ್ಣೆ ಬಂದ್ ಮಾಡಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ