ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಡಿಕೆಗಿಂತ ಕಡಿಮೆ ಸುರಿದ ಮುಂಗಾರು ಮಳೆ ; ರಾಜ್ಯದಲ್ಲಿ ಮತ್ತೆ ಹಿಂಗಾರು ಮಳೆಯ ಮುನ್ಸೂಚನೆ...!

Twitter
Facebook
LinkedIn
WhatsApp
ವಾಡಿಕೆಗಿಂತ ಕಡಿಮೆ ಸುರಿದ ಮುಂಗಾರು ಮಳೆ ; ರಾಜ್ಯದಲ್ಲಿ ಮತ್ತೆ ಹಿಂಗಾರು ಮಳೆಯ ಮುನ್ಸೂಚನೆ...!
ಅಕ್ಟೋಬರ್‌, ನವೆಂಬರ್‌ ಹಾಗೂ ಡಿಸೆಂಬರ್ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.40 ರಿಂದ 50 ರಷ್ಟು ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್‌ ಮಾಹಿತಿ ನೀಡಿದ್ದಾರೆ.ಮುಂಗಾರು ಮಳೆ ಹಿಂಬರುವಿಕೆಗೆ ಆರಂಭಗೊಂಡಿದೆ. ಅಕ್ಟೋಬರ್‌ 15ರ ವೇಳೆ ರಾಜ್ಯದಿಂದ ಹಿಂಮುಖವಾದ ಬಳಿಕ ಹಿಂಗಾರು ಆರಂಭಗೊಳ್ಳಲಿದೆ. ಸದ್ಯದ ಮಾಹಿತಿ ಪ್ರಕಾರ ಹಿಂಗಾರು ಅವಧಿಯ ಒಟ್ಟಾರೆ ಮಳೆ ಪ್ರಮಾಣಕ್ಕಿಂತ ಶೇ.40 ರಿಂದ 50 ರಷ್ಟು ಹೆಚ್ಚಿನ ಮಳೆ ಆಗಲಿದೆ. ಅದರಲ್ಲೂ ತೀವ್ರ ಮಳೆ ಕೊರತೆ ಎದುರಿಸುತ್ತಿರುವ ದಕ್ಷಿಣ ಒಳನಾಡು ಜಿಲ್ಲೆಗಳಾದ ಕೊಡಗು, ಮಂಡ್ಯ, ಹಾಸನ ಸೇರಿದಂತೆ ಮೊದಲಾದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
 

ಈ ಅವಧಿಯಲ್ಲಿ ಅವರು ನಲುವತ್ತಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆ, ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಮೇ 19ರಿಂದ 21ರ ವರೆಗೆ ಜಪಾನ್‌ ನ ಹಿರೋಶಿಮಾದಲ್ಲಿ ನಡೆಯಲಿರುವ ಜಿ7 ರಾಷ್ಟ್ರಗಳ ವಾರ್ಷಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

 

ವಿಜ್ಞಾನಿ ಡಾ.ಪ್ರಸಾದ್ ಅವರು ಹೇಳವಂತೆ ರಾಜಸ್ಥಾನ, ಗುಜರಾತ್, ಉತ್ತರಾಖಂಡ, ಉತ್ತರ ಪ್ರದೇಶಭಾಗದಲ್ಲಿ ಮುಂಗಾರು ಮಳೆ ಇನ್ನೂ ಇದೆ. ಆರಂಭವಾಗಲಿರುವ ಹಿಂಗಾರು ಮಳೆ ಮುಂದಿನ ಮೂರು ತಿಂಗಳಲ್ಲಿ ಅಬ್ಬರಿಸಲಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳು ಎಂದು ತಿಳಿಸಿದರು. 

 

ಇದೆ ತಿಂಗಳ ಅಕ್ಟೋಬರ್ ನಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಮಂಡ್ಯ, ಮೈಸೂರು, ಹಾಸನ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆ ಸುರಿಯುವ ಲಕ್ಷಣಗಳಿವೆ. ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ವಿಜಯನಗರ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ನಿರೀಕ್ಷೆಯಷ್ಟು ಮಳೆ ಆಗಲಿದೆ ಎಂದರು.

ವಾತಾವರಣದಲ್ಲಿ ಬದಲಾವಣೆ: ಏರುಗತಿಯಲ್ಲಿ ತಾಪಮಾನ ಹವಾಮಾನದಲ್ಲಿ ಪ್ರಭಾವ ಬೀರುವ ಎಲ್‌ನಿನೋ ತೀವ್ರವಾಗಿದ್ದು, ಇದು ಮುಂದಿನ 2024ರ ಫೆಬ್ರವರಿ ತಿಂಗಳವರೆಗೆ ಮುಂದುವರಿಯಲಿದೆ. ಈ ಕಾರಣದಿಂದ ವಾತಾವರಣದಲ್ಲಿ ತಾಪಮಾನವು ಏರುಗತಿಯಲ್ಲಿರಲಿದೆ ಎಂದು ಐಎಂಡಿ ತನ್ನ ದೀರ್ಘಾವಧಿ ಮುನ್ಸೂಚನಾ ವರದಿಯಲ್ಲಿ ಮಾಹಿತಿ ನೀಡಿದೆ. ಕರ್ನಾಟಕದಲ್ಲಿ ಮುಂದಿನ ಒಂದು ವಾರ ಅಲ್ಲಲ್ಲಿ ಹಗುರವಾಗಿ ಒಂದೆರಡು ಕಡೆ ಸಾಧಾರಣ ಮಳೆ ಆಗಲಿದೆ. ಮುಂದಿನ ಐದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ತುಂತುರು ಮಳೆ ಸಂಭವವಿದೆ. ಇನ್ನೂ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಹಗುರ ಮಳೆ ಸುರಿಯಲಿದೆ.
ಅಕ್ಟೋಬರ್ 10ರ ನಂತರ ದಕ್ಷಿಣ ಒಳನಾಡಿಗೆ ನಾಲ್ಕು ದಿನ ಹೆಚ್ಚು ಮಳೆ ಸಾಧ್ಯತೆ ಇದೆ. ಈ ವೇಳೆ ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಈ ಭಾಗದಲ್ಲಿ ಅಧಿಕ ಮಳೆಯಾಗಲಿದೆ. ಒಟ್ಟಾರೆ ಹಿಂಗಾರು ಮಳೆ ರೈತರಿಗೆ ಈ ವರ್ಷ ವರದಾನವಾಗಲಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಆಗದೇ ತುಸು ಸಮಸ್ಯೆ ಉಂಟಾಗುವ ಸಾಧ್ಯತೆಗಳು ಇವೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ