ವಿಶ್ವಕಪ್ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ
ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಾಳಿನ ವಿಶ್ವಕಪ್ ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ.
— CM of Karnataka (@CMofKarnataka) November 18, 2023
ಕ್ರಿಕೆಟ್ ಅಭಿಮಾನಿಗಳು ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು… pic.twitter.com/Dmk2rewPgy
ಈ ಸಂಬಂಧ ಸರ್ಕಾರದಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಾಳಿನ ವಿಶ್ವಕಪ್ (World Cup 2023) ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.
ಕ್ರಿಕೆಟ್ ಅಭಿಮಾನಿಗಳು ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಬೇಕೆಂದು ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವಕಪ್ ಮಹಾಸಮರಕ್ಕೆ ಅಹಮದಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂ ಸಾಕ್ಷಿಯಾಗುತ್ತಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ನಡೆಯಲಿದ್ದು, ಪಂದ್ಯಕ್ಕೂ ಮುನ್ನ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸೆ, ಬಾಲಿವುಡ್ ತಾರೆಯರು, ಸಚಿನ್ ತೆಂಡುಲ್ಕರ್ ಸೇರಿದಂತೆ ವಿಶ್ವಕಪ್ ಗೆದ್ದ ತಂಡದ ಮಾಜಿ ನಾಯಕರು ಉಪಸ್ಥಿತಿ ಇರಲಿದ್ದಾರೆ. ಇದಲ್ಲದೆ ಏರ್‍ಶೋ, ಲೇಸರ್ ಶೋ, ಸಂಗೀತ, ನೃತ್ಯ ವೈಭವ ವಿಶ್ವಕಪ್ ಫೈನಲ್ ಮ್ಯಾಚ್‍ನ ಕಿಕ್ಕನ್ನ ಹೆಚ್ಚಿಸಲಿದೆ.