Live Video ಮಾಡುತ್ತಲೇ ಅಂತ್ಯಕ್ರಿಯೆಗೆ ಪ್ರಿಯತಮೆಗೆ ಆಹ್ವಾನಿಸಿ ಪ್ರಾಣ ಬಿಟ್ಟ ಪ್ರೇಮಿ!
ಬೆಂಗಳೂರು: ಆಸ್ಪತ್ರೆಯಲ್ಲಿ ಪ್ರೇಮಿಯೊಬ್ಬ ವಿಡಿಯೋ ರೆಕಾರ್ಡ್ ಮಾಡಿ ತನ್ನ ಸಾವಿಗೆ ಪ್ರಿಯತಮೆಗೆ ಆಹ್ವಾನ ನೀಡಿ ಲೈವ್ನಲ್ಲೇ(Live Video) ಪ್ರಾಣಬಿಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿರಣ್(22) ಎಂಬ ಯುವಕ ಲೈವ್ ವಿಡಿಯೋ ಮಾಡಿ ಪ್ರಾಣ ಬಿಟ್ಟಿದ್ದಾನೆ. ಆಗಸ್ಟ್ 9 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಯುವಕ ಕಿರಣ್ ತನ್ನ ಲೈವ್ ವಿಡಿಯೋದಲ್ಲಿ ಪ್ರಿಯತಮೆಗೆ ತನ್ನ ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿದ್ದಾನೆ. ಹಾಗೂ ಅದೇ ಲೈವ್ ವಿಡಿಯೋದಲ್ಲಿ ಪ್ರಾಣಬಿಟ್ಟಿದ್ದಾನೆ. “ಹಾಯ್” ಬಂಗಾರಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ ಕಣೆ, “ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಆಗು”. ನಿನಗೆ ಹುಟ್ಟಿದ ಮಗುವಿಗೆ ನನ್ನ ಹೆಸರೇ ಇಡಬೇಕು…
ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗು. ನನ್ನ ಸಾವಿಗೆ ನಿನ್ನ ತಂಗಿಯನ್ನು ಕರೆದುಕೊಂಡು ಬಾ. ಒಳ್ಳೆಯದಾಗಲಿ ನಿಮ್ಮ ಕುಟುಂಬಕ್ಕೆ. ಹೀಗೆ ಚನ್ನಾಗಿರಿ ಎಂದು ಕಿರಣ್ ಲೈವ್ನಲ್ಲೇ ಕೈ ಮುಗಿದು ಪ್ರಾಣ ಬಿಟ್ಟಿದ್ದಾನೆ. ಇನ್ನು ರೇಬೀಸ್ ರೋಗ ಉಲ್ಬಣಗೊಂಡು ಯುವಕ ನಿಮಾನ್ಸ್ ಸೇರಿದ್ದ. ನಿಮಾನ್ಸ್ ಆಸ್ಪತ್ರೆಯ ಬೆಡ್ ಮೇಲೆಯೇ ವಿಡಿಯೋ ಮಾಡುತ್ತ ಪ್ರಾಣಬಿಟ್ಟಿದ್ದಾನೆ.
ಪಾಟ್ನಾ: ವ್ಯಕ್ತಿಯೋರ್ವ ನರ್ಸ್ (Nurse) ಅನ್ನು ಚಾಕುವಿನಿಂದ ಹಲವು ಬಾರಿ ಇರಿದು ಕೊಂದ ಬಳಿಕ ಅಲ್ಲಿಂದ ಪರಾರಿಯಾದ ಘಟನೆ ಬಿಹಾರದ (Bihar) ಪಾಟ್ನಾದಲ್ಲಿ (Patna) ನಡೆದಿದೆ. ಮೃತ ನರ್ಸ್ ಅನ್ನು ಸೋನಿ ಕುಮಾರಿ (25) ಎಂದು ಗುರುತಿಸಲಾಗಿದ್ದು, ಕೌಟುಂಬಿಕ ದ್ವೇಷದ (Family Feud) ಹಿನ್ನೆಲೆ ಆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಗರದ ಜನನಿಬಿಡ ತಾಣವಾದ ಪಾಟ್ನಾದ ಕಂಕರ್‌ಬಾಗ್‌ನಲ್ಲಿ ಶನಿವಾರ ಸಂಜೆ ಸುಮಾರು 4 ಗಂಟೆಯ ವೇಳೆಗೆ ಘಟನೆ ನಡೆದಿದೆ.
ಘಟನೆಯಲ್ಲಿ ನರ್ಸ್ ತೀವ್ರ ಗಾಯಗೊಂಡಿದ್ದು, ಕೂಡಲೇ ದಾರಿಹೋಕರು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಈಕೆ ಪೂರ್ಣಿಯಾ ಮೂಲದವಳಾಗಿದ್ದು, ಪಾಟ್ನಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಳು ಎಂದು ವರದಿಗಳು ತಿಳಿಸಿವೆ.
ನರ್ಸ್ ಆಸ್ಪತ್ರೆಯಲ್ಲಿ ತನ್ನ ಕೆಲಸ ಮುಗಿಸಿ ಹಾಸ್ಟೆಲ್‌ಗೆ ತೆರಳುತ್ತಿದ್ದ ಸಂದರ್ಭ ಆಕೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಘಟನೆ ಕುರಿತು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಅಲ್ಲದೇ ಆರೋಪಿಯ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.