ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

LK Advani Birthday: ಬಿಜೆಪಿ ಭೀಷ್ಮನನ್ನು ಭೇಟಿಯಾದ ಪ್ರಧಾನಿ ಮೋದಿ

Twitter
Facebook
LinkedIn
WhatsApp
LK Advani Birthday: ಬಿಜೆಪಿ ಭೀಷ್ಮನನ್ನು ಭೇಟಿಯಾದ ಪ್ರಧಾನಿ ಮೋದಿ

ಹಿರಿಯ ಬಿಜೆಪಿ (BJP) ನಾಯಕ ಎಲ್‌.ಕೆ. ಅಡ್ವಾಣಿ (L.K. Advani) ಅವರು ಇಂದು 95ನೇ ವರ್ಷಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬಿಜೆಪಿ ಭೀಷ್ಮನ ಮನೆಗೆ ಭೇಟಿ ನೀಡಿ ಹುಟ್ಟುಹಬ್ಬದ (Birthday) ಶುಭಾಶಯ ಕೋರಿದ್ದಾರೆ. ಈ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸಹ ಪ್ರಧಾನಿ ಮೋದಿಯವರೊಂದಿಗೆ ಇದ್ದರು. ಭೇಟಿಯ ಕೆಲವು ಫೋಟೋಗಳನ್ನು ಟ್ವಿಟ್ಟರ್‌ನಲ್ಲಿ (Twitter) ಹಂಚಿಕೊಂಡ ಪ್ರಧಾನಿ ಮೋದಿ, ಭಾರತದ ಬೆಳವಣಿಗೆಗೆ ಅಡ್ವಾಣಿಯವರ ಕೊಡುಗೆ ತುಂಬಾ ದೊಡ್ಡದಾಗಿದೆ ಎಂದು ಟ್ವೀಟ್‌ನಲ್ಲಿ ಬಿಜೆಪಿ ಭೀಷ್ಮನನ್ನು ಶ್ಲಾಘಿಸಿದ್ದಾರೆ. 
 
ಪ್ರಧಾನಿ ಮೋದಿಯವರು ಬಿಜೆಪಿ ನಾಯಕ ಅಡ್ವಾಣಿಯವರ ಪುತ್ರಿ ಪ್ರತಿಭಾ ಅಡ್ವಾಣಿಯೊಂದಿಗೆ ಹುಲ್ಲುಹಾಸಿನತ್ತ ನಡೆದುಕೊಂಡು ಹೋಗುತ್ತಿರುವುದನ್ನು ಮಾಧ್ಯಮಗಳ ವಿಡಿಯೋದಲ್ಲಿ ನೋಡಬಹುದಾಗಿದೆ. ನಂತರ, ಪ್ರಧಾನಿ ಮೋದಿ ಅಡ್ವಾಣಿ ಅವರಿಗೆ ಹೂಗುಚ್ಛವನ್ನು ನೀಡಿ ಕೆಲ ಕಾಲ ಮಾತನಾಡಿದ್ದಾರೆ. ಅವರು ಏನು ಮಾತನಾಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲವಾದರೂ, ಒಬ್ಬರಿಗೊಬ್ಬರು ಕುಳಿತುಕೊಂಡು ನಗು ನಗುತ್ತಾ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. 

ಇನ್ನು, “ರಾಷ್ಟ್ರ ಮತ್ತು ಸಂಘಟನೆಗಾಗಿ ನಿಮ್ಮ ಜೀವನವು ನಮಗೆ ಸ್ಫೂರ್ತಿಯಾಗಿದೆ” ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರು ಹಿಂದಿಯಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ಅಲ್ಲದೆ, ಅಡ್ವಾಣಿಯವರು ತಮ್ಮ ಅವಿರತ ಪ್ರಯತ್ನಗಳಿಂದ ದೇಶಾದ್ಯಂತ ಪಕ್ಷದ ಸಂಘಟನೆಯನ್ನು ಬಲಪಡಿಸಿದರು ಮತ್ತು ಸರ್ಕಾರದ ಭಾಗವಾಗಿದ್ದಾಗ ದೇಶದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ ಅಡ್ವಾಣಿ, ಕಳೆದ 3 ದಶಕಗಳಲ್ಲಿ ದೇಶದಲ್ಲಿ ಬಿಜೆಪಿ ಬೆಳವಣಿಗೆಯ ಹಿಂದಿನ ಪ್ರಮುಖ ಶಕ್ತಿಯಾಗಿ ಕಾಣುತ್ತಾರೆ. ಲೋಕಸಭೆಯಲ್ಲಿ 2 ಸ್ಥಾನಗಳನ್ನು ಹೊಂದಿದ್ದ ಪಕ್ಷ 1990 ರ ದಶಕದ ಅಂತ್ಯದಲ್ಲಿ ಮೈತ್ರಿ ಸರ್ಕಾರಗಳ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂತು. ಅಲ್ಲದೆ, 2014ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸ್ವಂತ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. 

1980 ರ ದಶಕದಿಂದ, ಅಡ್ವಾಣಿ ಅವರು ಅಯೋಧ್ಯೆಯಲ್ಲಿ ರಾಮಮಂದಿರದ ಬೇಡಿಕೆಯನ್ನು ಸಮರ್ಥಿಸಿಕೊಂಡರು. ಇವರ ನೇತೃತ್ವದಲ್ಲಿ ‘ರಥ ಯಾತ್ರೆ’ ಮಾಡಿದ್ದು, ಹಿಂದುತ್ವ ರಾಜಕೀಯದ ಉದಯದಲ್ಲಿ ಒಂದು ಪ್ರಮುಖ ಘಟನೆಯಾಗಿದೆ. ಪ್ರಧಾನಿ ಮೋದಿ ಸಹ ಈ ಸಮಯದದಿಂದ ಬಿಜೆಪಿಯಲ್ಲಿ ಗುರುತಿಸಿಕೊಳ್ಳಲು ಆರಂಭಸಿದರು. 2014 ರ ಚುನಾವಣೆ ಮೊದಲು, ಅಡ್ವಾಣಿಯವರೇ ಬಿಜೆಪಿ ಮುಂದಿನ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ಕಂಡುಬಂದರಾದರೂ, ಮೋದಿಯವರ ಜನಪ್ರಿಯತೆ ಹೆಚ್ಚಾದಂತೆ ಅವರು ದೂರ ಸರಿಯಬೇಕಾಯಿತು.

ವಕೀಲ ಶಿಕ್ಷಣ ಪಡೆದಿರುವ ಎಲ್‌.ಕೆ. ಅಡ್ವಾಣಿ ಅವರು ಆರ್‌ಎಸ್‌ಎಸ್‌ ವಲಯದಲ್ಲೂ ಹೆಚ್ಚು ಗುರುತಿಸಿಕೊಂಡಿದ್ದರು. ಆದರೂ ಅವರು ಅನೇಕ ಆರ್‌ಎಸ್‌ಎಸ್ ಕಾರ್ಯಕರ್ತರಂತೆ ಅವಿವಾಹಿತರಾಗಿ ಉಳಿದಿಲ್ಲ. ಅಡ್ವಾಣಿ ಅವರಿಗೆ ಒಬ್ಬ ಮಗ ಮತ್ತು ಮಗಳು ಇದ್ದು, ಅವರ ಪತ್ನಿ 2016 ರಲ್ಲಿ ನಿಧನರಾಗಿದ್ದಾರೆ.

ಅಡ್ವಾಣಿ ಅವರು ನವೆಂಬರ್ 8, 1927 ರಂದು ಕರಾಚಿಯಲ್ಲಿ ಸಿಂಧಿ ಕುಟುಂಬದಲ್ಲಿ ಜನಿಸಿದರು. 1947 ರ ಭಾಋತ – ಪಾಕಿಸ್ತಾನ ವಿಭಜನೆಯ ನಂತರ ಕುಟುಂಬವು ಬಾಂಬೆಗೆ (ಈಗ ಮುಂಬೈ) ಸ್ಥಳಾಂತರಗೊಂಡಿತು. ಅವರು ರಾಜಸ್ಥಾನದಲ್ಲಿ RSS ಗೆ ಕೆಲಸ ಮಾಡಿದರು ಮತ್ತು ಗುಜರಾತ್ ಹಾಗೂ ದೆಹಲಿಯ ಚುನಾವಣೆಗಳಲ್ಲೆ ಗೆಲುವು ಸಾಧಿಸಿದ್ದರು. 

ಅವರು 1998 ರಿಂದ 2004 ರವರೆಗೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದರು. 2002 ರಿಂದ 2004 ರವರೆಗೆ ಉಪ ಪ್ರಧಾನ ಮಂತ್ರಿಯಾಗಿಯೂ ಸೇವೆ ಸಲ್ಲಿಸಿದರು. 2015 ರಲ್ಲಿ, ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ನೀಡಿ ಗೌರವಿಸಲಾಗಿದೆ. 

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ