- ಬಂಟ್ವಾಳ
- 8:12 ಫೂರ್ವಾಹ್ನ
- ಮಾರ್ಚ್ 13, 2023
ಕಲ್ಲಡ್ಕ: ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿ ವ್ಯಕ್ತಿ ಸಾವು

ಕಾರಿನೊಳಗೆ ವ್ಯಕ್ತಿಯೋರ್ವನು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟ ಯುವಕ.
ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ಬೆಳಿಗ್ಗೆ ಬಾವನ ಜೊತೆ ಬೆಳಿಗ್ಗೆ ತರವಾಡು ಮನೆಯಲ್ಲಿ ದೈವದ ಕಾರ್ಯಕ್ಕೆ ಮಕ್ಕಳ ಜೊತೆ ಹೋಗಿದ್ದ ಎನ್ನಲಾಗಿದೆ.
ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದ್ದಾಗ ಸುಮಾರು 1.30 ಗಂಟೆ ಗೆ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿದ್ದು ನಾನು ಮತ್ತೆ ಮನೆಗೆ ಬರುತ್ತೇನೆ ನೀವುಮಕ್ಕಳ ಜೊತೆ ಮನೆಗೆ ಹೋಗಿ ಎಂದು ಕಳುಹಿಸಿ,ಕಾರಿನ ಸೀಟಿನಲ್ಲಿಯೇ ಮಲಗಿದ್ದ.ಆದರೆ ರಾತ್ರಿ 7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡುಬಂತು.ಕಾರಿನ ಗ್ಲಾಸ್ ಹಾಕಿ ಮಲಗಿದ್ದರಿಂದ ಕಾರಿನ ಡೋರ್ ಓಪನ್ ಮಾಡಿದಾಗ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.ಕಾರಿನ ಕಿಟಕಿ ,ಬಾಗಿಲನ್ನು ಮುಚ್ಚಿ ಮಲಗಿದ್ದರಿಂದ ಗಾಳಿ ಇಲ್ಲದೆ ಸಾವನ್ನಪಿದಾ? ಅಥವಾ ಇನ್ನಾವುದೇ ಕಾಯಿಲೆಯಿಂದ ಮೃತಪಟ್ಟಿದ್ದಾನಾ? ಎಂಬುದು ವೈದ್ಯಕೀಯ ರಿಪೋರ್ಟ್ ಹಾಗೂ ಪೊಲೀಸ್ ತನಿಖೆಯ ಬಳಿಕ ತಿಳಿಯಬೇಕಾಗಿದೆ.