ಮಂಗಳವಾರ, ಮೇ 30, 2023
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ-ಕಡಬದ ಯುವಕ ವಿದೇಶದಲ್ಲಿ ನೇಣಿಗೆ ಶರಣು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದಾಗ ಸೀರೆ ಕುತ್ತಿಗೆಗೆ ಸಿಲುಕಿ ಬಾಲಕಿ ಮೃತ್ಯು

Twitter
Facebook
LinkedIn
WhatsApp
34

ಕಾರ್ಕಳ, ಮೇ 27: ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕತ್ತಿಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ  ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ. ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ ( 9) ಜೀವ ಕಳೆದುಕೊಂಡವಳು.

ಮೇ 26ರ ಸಂಜೆ 4:00 ಗಂಟೆಗೆ ಮನೆ ಪರಿಸರದಲ್ಲಿ ಸಂಬಂಧಿಕ ಚಿಕ್ಕಪ್ಪ ಉದಯ ಪೂಜಾರಿ ಎಂಬವರ ಮನೆಯ ಬಳಿ  ನೆರೆಕರೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ  ಸುತ್ತಿಕೊಂಡಿತ್ತು.

ತುರ್ತು ಚಿಕಿತ್ಸೆಗೆಂದು ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕಿಯನ್ನು ಕರೆದೊಯ್ಯಲಾಗಿತ್ತು. ವೈದ್ಯಾಧಿಕಾರಿಯವರು ಮಾನ್ವಿಯನ್ನು ಆರೋಗ್ಯ ತಪಾಸಣೆ ನಡೆಸಿದ್ದು ಅದಾಗಲೇ ಆಕೆ  ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದರು.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು