ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನೆಲ್ಯಾಡಿಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತ್ಯು! ತಂದೆ ಮಗನಿಗೆ ಗಂಭೀರ ಗಾಯ

Twitter
Facebook
LinkedIn
WhatsApp
Untitled 3

ನೆಲ್ಯಾಡಿ: ರಸ್ತೆ ಬದಿಯ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮಾ.30ರಂದು ಬೆಳಿಗ್ಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್ ಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಅನ್ನಪೂರ್ಣ (50 ವ)ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ಮೃತ ಮಹಿಳೆಯ ಪುತ್ರ ಅಶ್ವಿನ್(25 ವ) ಹಾಗೂ ಪತಿ ಭಾಸ್ಕರ 5ವ ಗಂಭೀರ ಗಾಯಗೊಂಡಿದ್ದು ಇಬ್ಬರನ್ನು ನೆಕ್ಕಾಡಿ ಅಶ್ವಿನಿ ಆಧ್ಯಕ್ತಿಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಡಿವೈಡರ್‌ಗೆ ಡಿಕ್ಕಿ:

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ಕರ್ಬಸಂಕ ಬಳಿ ಸೇತುವೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ಡಿವೈಡರ್ ಅಳವಡಿಸಲಾಗಿದೆ. ಕಾರಿನ ಚಾಲಕನಿಗೆ ಇದರ ಅರಿವಾಗದೇ ಡಿಕ್ಕಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ರವಿ ಬಿ.ಎಸ್., ಸಬ್ ಇನ್ಸಪೆಕ್ಟರ್ ರಾಜೇಶ್ ಕೆ.ವಿ., ನೆಲ್ಯಾಡಿ ಹೊರಠಾಣೆಯ ಹೆಡ್‌ಕಾನ್‌ಸ್ಟೇಬಲ್ ಬಾಲಕೃಷ್ಣ, ಕುಶಾಲಪ್ಪ ನಾಯ್ಕರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು