- ಬಂಟ್ವಾಳ
- 1:43 ಅಪರಾಹ್ನ
- ಮಾರ್ಚ್ 13, 2023
ಬಂಟ್ವಾಳದ ರಾಯಿ ಎಂಬಲ್ಲಿ ಸ್ಕೂಟರ್ ಗೆ ಕಾರು ಢಿಕ್ಕಿಯಾಗಿ ಓರ್ವ ಮೃತ್ಯು, ಇನ್ನೋರ್ವ ಗಂಭೀರ
Twitter
Facebook
LinkedIn
WhatsApp

ಬಂಟ್ವಾಳ, ಮಾ 13 : ದ್ವಿಚಕ್ರ ವಾಹನಕ್ಕೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ಬೈಪಾಸ್ ನಿವಾಸಿ ಎಲೆಕ್ಟ್ರಿಕ್ ಗುತ್ತಿಗೆದಾರ ಚಂದ್ರಶೇಖರ ಮೃತಪಟ್ಟ ವ್ಯಕ್ತಿ. ಬಂಟ್ವಾಳ ನಿವಾಸಿ ಇಡ್ಲಿ ಯೋಗೀಶ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ.
ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ ವೇಳೆಗೆ ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ದ್ವಿಚಕ್ರ ದಲ್ಲಿ ಹಿಂಬದಿಯ ಸವಾರನಾಗಿದ್ದ ಚಂದ್ರಶೇಖರ ಅವರು ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ.ಚಾಲಕ ಯೋಗೀಶ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಚಾಲಕನ ಅತಿವೇಗದ ಹಾಗೂ ಅಜಾಗರೂಕತೆಯ ಚಾಲನೆಯೆ ಘಟನೆ ಗೆ ಕಾರಣವೆನ್ನಲಾಗಿದೆ.ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ