ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ: ಕಾರಿಂಜೇಶ್ವರ ಸುತ್ತ ಗಣಿಗಾರಿಕೆ ನಿಷೇಧಿಸಿ ಸರ್ಕಾರ ಆದೇಶ

Twitter
Facebook
LinkedIn
WhatsApp
karinjeshwara1

ಬಂಟ್ವಾಳ, ಮಾ 15 : ಭಾರೀ ಗಣಿಗಾರಿಕೆಗೆ ನಲುಗಿ ಹೋಗಿದ್ದಜಿಲ್ಲೆಯ ಪ್ರಸಿದ್ದ ಧಾರ್ಮಿಕ ಪುಣ್ಯ ಕ್ಷೇತ್ರ ಶ್ರೀ ಕಾರಿಂಜೇಶ್ವರದ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಿ ಕೊನೆಗೂ ರಾಜ್ಯ ಸರಕಾರ ಅದೇಶ ಹೊರಡಿಸಿದೆ. ಶ್ರೀ ಕಾರಿಂಜೇಶ್ವರ ದೇವಸ್ಥಾನದ 2 ಕಿ.ಮೀ. ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ ಎಲ್ಲ ರೀತಿಯ ಗಣಿಗಾರಿಕೆ ಮತ್ತು ಕ್ರಷರ್‌ ಚಟುವಟಿಕೆಯನ್ನು ನಿಷೇಧಿಸಲಾಗಿದೆ.

 

ಕಾರಿಂಜ ದೇವಾಲಯದ ಸುತ್ತಮುತ್ತ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂದು ದೇವಸ್ಥಾನದ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಲು ಮತ್ತು ಪಾವಿತ್ರ್ಯ ಉಳಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆಯು ಮನವಿ, ಹೋರಾಟ ನಡೆಸಿತ್ತು. ಗಣಿಕಾರಿಕೆ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು. ಅದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಅದೇಶ ಮಾಡಿದೆ

ದೇವಸ್ಥಾನದ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಲು ಮತ್ತು ಪಾವಿತ್ರ್ಯ ಉಳಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆಯು ಮನವಿ, ಹೋರಾಟ ನಡೆಸಿತ್ತು. ಅದಕ್ಕೆ ಪೂರಕವಾಗಿ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ಕುಮಾರ್‌ ಅವರನ್ನು ಕ್ಷೇತ್ರಕ್ಕೆ ಕರೆಸಿ ಗಣಿಗಾರಿಕೆ ನಿಷೇಧ ಪ್ರದೇಶವೆಂದು ಘೋಷಿಸುವಂತೆ ಸರಕಾರಕ್ಕೆ ಒತ್ತಡ ಹೇರಿದ್ದರು.

ಸಿಎಂ ನಿರ್ದೇಶನದಂತೆ ಕ್ಷೇತ್ರದ ಸುತ್ತ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ದ.ಕ. ಜಿಲ್ಲಾಧಿಕಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ಸಹಾಯಕ ಕಮಿಷನರ್‌ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರ ಮೂಲಕ ದೇವಸ್ಥಾನದ ಸುತ್ತಮುತ್ತ ಜಂಟಿ ಸ್ಥಳ ಪರಿಶೀಲನೆ ನಡೆಸಲಾಗಿತ್ತು.ಈ ಪರಿಶೀಲನೆಯ ವರದಿಯ ಆಧಾರದಲ್ಲಿ ಜಿಲ್ಲಾಧಿಕಾರಿಯವರು ಕಾರಿಂಜ ದೇವಸ್ಥಾನದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯನ್ನು ಗಣಿಗಾರಿಕೆ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಶ್ರೀ ಕ್ಷೇತ್ರದ ಪಾವಿತ್ರತೆ ಮತ್ತು ಸಂರಕ್ಷಣೆಗಾಗಿ ಸ್ಥಳೀಯ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ದೇವಾಲಯದ ಸುತ್ತಮುತ್ತಲಿನ 02.00 ಕಿ.ಮೀ. ವ್ಯಾಪ್ತಿಯನ್ನು ಗಣಿಗಾರಿಕೆ ಚಟುವಟಿಕೆಗಳ ನಿಷೇಧಿತ ಪ್ರದೇಶ ಎಂದು ಘೋಷಿಸಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು