ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಮನೆಯ ಬೀಗ ಮುರಿದು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

Twitter
Facebook
LinkedIn
WhatsApp
theft istock 1180920 1673661121

ಬಂಟ್ವಾಳ : ಮನೆಯ ಬೀಗ ತೆಗೆದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ.

 

ಒಟ್ಟು 3,11,550 ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದ್ದು, ಸಣ್ಣ ಪ್ಲಾಸಿಕ್‌ ಬಾಕ್ಸ್‌ನಲ್ಲಿ ಇಟ್ಟಿದ್ದ ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ, ಅಂದಾಜು ತೂಕ 35 ಗ್ರಾಂ, 2 ಕೈಬಳೆಗಳು ಅಂದಾಜು ತೂಕ 20ಗ್ರಾಂ, ಇವುಗಳು ಕಳವಾಗಿದೆ.

ಇವುಗಳ ಒಟ್ಟು ತೂಕ 93 ಗ್ರಾಂ ಆಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯಿಂದ ಮಾಡಿದ್ದಾರೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಗೆ ಮನೆಯ ಮಾಲಕಿ ರೋಹಿಣಿ ದೂರು ನೀಡಿದ್ದಾರೆ.

ರೋಹಿಣಿ ಹಾಗೂ ಅವರ ಗಂಡ ಇಬ್ಬರು ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಅದೇ ರೀತಿ ಮಾ.7.ರಂದು ಮನೆಯಿಂದ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರು. ಕೆಲಸಕ್ಕೆ ಹೋಗುವ ವೇಳೆ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಬಚ್ಚಲು ಕೋಣೆಯಲ್ಲಿ ಇರಿಸಿ ಹೋಗುತ್ತಿದ್ದರು. ನಿನ್ನೆಯೂ ಅದೇ ರೀತಿ ಬೀಗದ ಕೀಯನ್ನು ಬಚ್ಚಲು ಮನೆಯ ಕಿಟಕಿ ಯಲ್ಲಿಟ್ಟು ತೆರಳಿದ್ದರು.

ಸಂಜೆ ಗಂಡ ಹೆಂಡತಿ ಕೆಲಸ ಮುಗಿಸಿ ಮನೆಗೆ ಬಂದು ನೋಡುವಾಗ ಮನೆಗೆ ಬೀಗ ಹಾಕಿತ್ತು.ಬೀಗ ತೆಗೆದು ಮಬೆಯಯ ಒಳಗೆ ಹೋದಾಗ ಕೋಣೆಯಲ್ಲಿ ದ್ದ ಗೊದ್ರೆಜ್ ನಿಂದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಕೆಳಗೆ ಬಿದ್ದಿತ್ತು.

ಗೊದ್ರೆಜ್ ಓಪನ್ ಮಾಡಿ ನೋಡಿದಾಗ ಅದರೊಳಗಿದ್ದ ಚಿನ್ನಾಭರಣಗಳು ಕಳವುವಾಗಿರುವುದು ಗಮನಕ್ಕೆ ಬಂದಿದೆ.
ಸ್ಥಳಕ್ಕೆ ಗ್ರಾಮಾಂತರ ಎಸ್.ಐ.ಉದಯ ರವಿ ಬೇಟಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು