- ಸುಳ್ಯ
- 8:49 ಅಪರಾಹ್ನ
- ಮಾರ್ಚ್ 13, 2023
ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಲೋಕಾರ್ಪಣೆ
Twitter
Facebook
LinkedIn
WhatsApp

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮ ಮಾ.13ರಂದು ನಡೆಯಿತು.ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ನೂತನ ಪೊಲೀಸ್ ಠಾಣಾ ಕಟ್ಟಡ ಲೋಕಾರ್ಪಣೆ ಮಾಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ಸುಳ್ಯ ಪ್ರಭಾರ ತಹಶೀಲ್ದಾರ್ ಜಿ.ಮಂಜುನಾಥ್, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಂ.ಎನ್., ಸುಳ್ಯ ವೃತ್ತ ನಿರೀಕ್ಷಕ ರವೀಂದ್ರ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಮಟೆ ವಿಕ್ರಮ್ ಸ್ವಾಗತಿಸಿದರು. ಪೊಲೀಸ್ ಅಧಿಕಾರಿ ಭಾಸ್ಕರ್ ನಿರೂಪಿಸಿದರು. ಪೊಲೀಸ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು, ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.