ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂಜಾನೆ ಹೊತ್ತಿಗೆ ಪ್ರಪಾತಕ್ಕೆ ಬಿದ್ದ ಬೈಕ್ - ಹಿಂಬದಿ ಸವಾರ ಸಾವು!

Twitter
Facebook
LinkedIn
WhatsApp
ankita amar 5 2

ಬಂಟ್ವಾಳ: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಮುಂಜಾವಿನ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.

ಚಿಕ್ಕಮಗಳೂರು ನಿವಾಸಿ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ (25) ಮೃತಪಟ್ಟ ದುರ್ದೈವಿ ಯುವಕ.

 

ಈತನ ಸ್ನೇಹಿತ ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ. ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಸುಮಾರು 3.30 ಗಂಟೆ ವೇಳೆಗೆ ಬರುತ್ತಿರುವಾಗ ಬಿಸಿರೋಡಿನ ಕೈಕಂಬ ಸಮೀಪದ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ದ ಬಳಿ ತಲಪಾಡಿ ಎಂಬಲ್ಲಿ ಸುಮಾರು ಹತ್ತಕ್ಕೂ ಅಧಿಕ ಅಡಿ ಇರುವ ಆಳಕ್ಕೆ ಬಿದ್ದು ಬೈಕಿನ ಹಿಂಬದಿಯಲ್ಲಿ ಇದ್ದ ಸಹಸವಾರ ಯಶೋಧರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಅಪಘಾತಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು