ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಶಾಂತ್ರಿಗೆ ಹೋದ ಆನೆಗಳು ಬರಲೇ ಇಲ್ಲ; ಸಾರ್ವಜನಿಕರ ಆಕ್ರೋಶ

Twitter
Facebook
LinkedIn
WhatsApp
index 9

ಕಡಬ: ಕಳೆದ ತಿಂಗಳು ರೆಂಜಿಲಾಡಿ ಗ್ರಾಮದ ನೈಲದಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದ ಬಳಿಕವೂ ಕಡಬ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಜನರನ್ನು ತಲ್ಲಣಗೊಳಿಸಿದೆ. ಕೃಷಿ ತೋಟಗಳಿಗೆ ಲಗ್ಗೆ ಇಟ್ಟು ಕೃಷಿ ನಾಶಮಾಡಿ ಜೀವ ಭಯ ಹುಟ್ಟಿಸಿರುವ ಕಾಡಾನೆ ಗಳನ್ನು ಹಿಡಿದು ಸ್ಥಳಾಂತರಿಸಲಾಗುವುದು ಎಂದು ಹೇಳಿ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯ ಇಲಾಖೆ ಒಂದು ಕಾಡಾನೆಯನ್ನು ಸೆರೆಹಿಡಿದು ಮೂರೇ ದಿನಕ್ಕೆ ಕಾರ್ಯಾ ಚರಣೆ ಸ್ಥಗಿತಗೊಳಿಸಿ ವಿಶಾಂತ್ರಿಗೆಂದು ಹೋದ ಆನೆಗಳು ಬರಲೇ ಇಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

 

ರೆಂಜಿಲಾಡಿ ಘಟನೆಯಿಂದ ಆಕ್ರೋಶಗೊಂಡಿದ್ದ ಸ್ಥಳೀಯ ಜನರು ಕಾಡಾನೆಗಳ ಹಾವಳಿಯನ್ನು ತಡೆಯಲು ಕ್ರಮ ಕೈಗೊಳ್ಳ ಬೇಕು, ಜನರನ್ನು ಬಲಿ ಪಡೆದ ಆನೆಗಳನ್ನು ಸೆರೆಹಿಡಿಯಬೇಕು ಎಂದು ಪಟ್ಟುಹಿಡಿದಿದ್ದ ಹಿನ್ನೆಲೆಯಲ್ಲಿ ಕಾಡಾನೆಯನ್ನು ಹಿಡಿಯಲು 5 ತರಬೇತಿ ನೀಡಿದ ಆನೆಗಳನ್ನು ಕರೆಸಿ ಕಾಡಾನೆ ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆಗೆ ಫೆ. 21 ರಂದು ಚಾಲನೆ ನೀಡಲಾಗಿತ್ತು. ನಿರಂತರ ಮೂರು ದಿನಗಳ ಕಾರ್ಯಾಚರಣೆ ನಡೆದು ಫೆ. 23 ರಂದು ಸಂಜೆ ಕೊಂಬಾರು ಗ್ರಾಮದ ಮಂಡೆಕರ ಬಳಿಯ ಅರಣ್ಯದಲ್ಲಿ ಒಂದು ಕಾಡಾನೆಯನ್ನು ಸೆರೆ ಹಿಡಿದು ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿತ್ತು. ಬಳಿಕ ಸಾಕಾನೆಗಳನ್ನು ವಿಶ್ರಾಂತಿಗೆಂದು ಕಳುಹಿಸಲಾಗಿತ್ತು.

ಆದರೆ ವಿಶ್ರಾಂತಿಗೆಂದು ತೆರಳಿದ ಆನೆಗಳು ಮತ್ತೆ ಕಾರ್ಯಾಚರಣೆಗೆ ಬರಲೇ ಇಲ್ಲ. ಕಾರ್ಯಾಚರಣೆ ನಿಲ್ಲುವು ದಿಲ್ಲ, ಮುಂದು ವರಿಯಲಿದೆ. ಉಪಟಳ ನೀಡುವ ಎಲ್ಲ ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಲಾಗುವುದು ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಅರಣ್ಯಾಧಿಕಾರಿಗಳು ಕೂಡ ಈಗ ಸುಮ್ಮನಾಗಿದ್ದಾರೆ. ಇತ್ತ ಜನರು ಕಾಡಾನೆಗಳಿಂದ ತೊಂದರೆ ಅನುಭವಿಸುತ್ತಲೇ ಇದ್ದಾರೆ.

ಕೊಂಬಾರು, ಸಿರಿಬಾಗಿಲು ಗ್ರಾಮಗಳಲ್ಲಿ ಹೆಚ್ಚಿದ ಆನೆ ಉಪಟಳ ಕಳೆದ ಹಲವು ವರ್ಷಗಳಿಂದ ಕಾಡಾನೆಗಳ ದಾಳಿಯಿಂದಾಗಿ ಕಂಗಾ ಲಾಗಿರುವ ಮಲೆನಾಡ ತಪ್ಪಲಿನ ಕೊಂಬಾರು ಗ್ರಾ.ಪಂ. ವ್ಯಾಪ್ತಿಯ ಕೊಂಬಾರು ಹಾಗೂ ಸಿರಿಬಾಗಿಲು ಗ್ರಾಮಗಳಲ್ಲಿ ಕಾಡಾನೆಗಳ ತೊಂದರೆ ಮೇರೆ ಮೀರಿದೆ. ಪಕ್ಕದ ಗ್ರಾಮಗಳಾದ ಶಿರಾಡಿ ಹಾಗೂ ರೆಂಜಿಲಾಡಿಯಲ್ಲಿ ಆನೆಗಳಿಂದಾಗಿ ಜೀವಹಾನಿಯಾದ ಕಾರಣ ದಿಂದಾಗಿ ಇಲ್ಲಿನ ಜನರೂ ಜೀವ ಭಯ ದಿಂದ ತತ್ತರಿಸುವಂತಾಗಿದೆ. ಕೃಷಿ ತೋಟ ಗಳಿಗೆ ಪಕ್ಕದ ಕಾಡಿನಿಂದ ಆಹಾರ ಅರಸಿ ಕೊಂಡು ಬರುವ ಕಾಡಾನೆಗಳಿಗೆ ದಿನ ನಿತ್ಯ ಅಪಾರ ಪ್ರಮಾಣದ ಕೃಷಿ ಆಹುತಿಯಾಗುತ್ತಿರುವುದರ ಜತೆಗೆ ಜನರು ರಾತ್ರಿ ಮಾತ್ರವಲ್ಲದೇ ಹಗಲು ಹೊತ್ತಿನಲ್ಲಿಯೂ ಪ್ರಾಣ ಭೀತಿಯಿಂದಲೇ ಓಡಾಡುವಂತಾಗಿದೆ.ಪರಿಹಾರ ಧನ ಮಾತ್ರ ಅತ್ಯಲ್ಪ ಅಭಿವೃದ್ಧಿಯ ವಿಚಾರದಲ್ಲಿ ಸಾಕಷ್ಟು ಹಿಂದುಳಿದಿರುವ ಕೊಂಬಾರು ಹಾಗೂ ಸಿರಿಬಾಗಿಲು ಗ್ರಾಮಗಳಲ್ಲಿ ಜನವಸತಿ ಪ್ರದೇಶಕ್ಕಿಂತ ಹೆಚ್ಚು ಅರಣ್ಯವೇ ಆವರಿಸಿ ಕೊಂಡಿದೆ. ಒಂದು ಅಂದಾಜಿನ ಪ್ರಕಾರ ವರ್ಷದಲ್ಲಿ ಕನಿಷ್ಠ ಎಂದರೂ 3-4 ಸಾವಿರ ಅಡಿಕೆ ಮರಗಳು, ಸಾವಿರಕ್ಕೂ ಮಿಕ್ಕಿ ರಬ್ಬರ್‌ ಗಿಡಗಳು, ನೂರಾರು ತೆಂಗಿನ ಮರಗಳು, ಸಾವಿರಾರು ಬಾಳೆ ಗಿಡಗಳು, ಕೃಷಿಗೆ ನೀರುಣಿಸುವ ನೀರಾ ವರಿ ಪೈಪ್‌ಗ್ಳು ಆನೆಗಳಿಂದಾಗಿ ಇಲ್ಲಿ ನಾಶವಾಗುತ್ತಿವೆ. ಈ ಹಾನಿಗಳಿಗೆ ಸರಕಾರ ದಿಂದ ಲಭಿಸುವ ಪರಿಹಾರ ಧನ ಮಾತ್ರ ಅತ್ಯಲ್ಪ. ಇಲ್ಲಿನ ಶೇ. 75ಕ್ಕೂ ಹೆಚ್ಚು ರೈತರು ಆನೆಗಳ ಉಪಟಳದಿಂದ ನಿರಂತರ ನಷ್ಟ ಅನುಭವಿಸುತ್ತಲೇ ಇದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು