ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಳ್ಯ ಕಾಳ್ಗಿಚ್ಚು ತೀವ್ರ: ನಿಯಂತ್ರಣಕ್ಕೆ ಹರಸಾಹಸ, ಆತಂಕ

Twitter
Facebook
LinkedIn
WhatsApp
pro 3

ಸುಳ್ಯ : ತಾಲೂಕಿನ ಮಡಪ್ಪಾಡಿ ಭಾಗದಲ್ಲಿ ಉಂಟಾಗಿರುವ ಕಾಳ್ಗಿಚ್ಚಿನ ನಿಯಂತ್ರಣ ತ್ರಾಸದಾಯಕ ವಾಗಿದ್ದು, ಅರಣ್ಯ ಸಿಬಂದಿ ಹಾಗೂ ಸ್ಥಳೀಯರಿಗೆ ಬೆಂಕಿ ನಂದಿಸಲು ತೀವ್ರ ಹರಸಾಹಸ ಪಡುತ್ತಿದ್ದಾರೆ.ಮಡಪ್ಪಾಡಿ ಸಮೀಪದ ಶೀರಡ್ಕ, ಹಾಡಿಕಲ್ಲು ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಕಾಳ್ಗಿಚ್ಚು ಉಂಟಾಗಿತ್ತು. ಅರಣ್ಯ ಇಲಾಖೆಯ ತಂಡ ಸ್ಥಳದಲ್ಲಿ ಬೀಡುಬಿಟ್ಟು ಕಾಳ್ಗಿಚ್ಚು ನಂದಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

 

ರವಿವಾರ ಶೀರಡ್ಕ ಭಾಗದಲ್ಲಿ ಕಾಳ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆ ಮತ್ತು ಹೊಗೆ ಏಳುವುದು ಮಡಪ್ಪಾಡಿಗೆ ಕಾಣಿಸಿತ್ತು. ಸೋಮವಾರವೂ ಬೆಂಕಿಯ ತೀವ್ರತೆ ಮುಂದುವರಿದಿದೆ.

ಹಾಡಿಕಲ್ಲು ಭಾಗದಲ್ಲಿ ಬೆಂಕಿಯ ತೀವ್ರತೆ ಹೆಚ್ಚಿದ್ದು, ಕಾರ್ಯಾಚರಣೆ ಯನ್ನು ಸಮರ್ಪಕವಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. ಅಗ್ನಿಶಾಮಕ ದಳದ ವಾಹನ ತೆರಳಲು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಸಿಬಂದಿ ಹಾಗೂ ಸ್ಥಳೀಯರು ಜತೆಗೂಡಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.ನಿಯಂತ್ರಣ ಕಷ್ಟಸಾಧ್ಯವಾಗುತ್ತಿದ್ದು, ಬೆಂಕಿ ವ್ಯಾಪಕವಾಗಿ ಹಬ್ಬುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಡಪ್ಪಾಡಿ ಭಾಗದಲ್ಲಿ ಬೆಂಕಿ ನಂದಿಸುವುದರ ಜತೆಗೆ ಬೆಂಕಿ ಮತ್ತಷ್ಟು ವಿಸ್ತರಿಸದಂತೆ ಬ್ಲೋವರ್‌ ಮುಖಾಂತರ ತರಗೆಲೆಗಳನ್ನು ಬದಿಗೆ ಸೇರಿಸಲಾಯಿತು ಎಂದು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರು ಮಾಹಿತಿ ನೀಡಿದ್ದಾರೆ.

ಬಿದಿರು, ಕೆಲವು ಮರಗಳಿಗೆ ಬೆಂಕಿ ಹಬ್ಬಿದೆ. ಒಣ ಹುಲ್ಲು, ತರಗೆಲೆ ಗಳಿಂದಾಗಿ ಬೆಂಕಿ ತೀವ್ರವಾಗಿ ಹರಡು ತ್ತಿದೆ. ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು ತೀವ್ರವಾಗಿದೆ. ಕೆಲವರ ರಬ್ಬರ್‌ ತೋಟದ ಸಮೀಪದ ವರೆಗೂ ಬೆಂಕಿ ಹಬ್ಬಿದ್ದು, ಸ್ಥಳಿಯರಲ್ಲಿ ಆತಂಕ ಎದುರಾಗಿದೆ.

ಮರ್ಕಂಜದ ಮೈರಾಜೆ ಕಾಡಿಗೆ ಎರಡು-ಮೂರು ದಿನಗಳ ಹಿಂದೆ ಬೆಂಕಿ ಬಿದ್ದಿದ್ದು, ಅದು ನಿಯಂತ್ರಣಕ್ಕೆ ಬರುವ ಮೊದಲೇ ಸಮೀಪದ ಅಜ್ಜಿಕಲ್ಲು -ಕುಧ್ಕುಳಿ ಭಾಗದ ಗುಡ್ಡದಲ್ಲಿ ಬೆಂಕಿ ಅನಾಹುತ ಉಂಟಾಗಿದೆ. ರವಿವಾರ ರಾತ್ರಿ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಅರಣ್ಯ ಪ್ರದೇಶದಲ್ಲಿ ಬೆಂಕಿಯ ತೀವ್ರತೆ ಹೆಚ್ಚಿರುವುದರಿಂದ ಪೂರ್ಣ ವಾಗಿ ಶಮನಗೊಳ್ಳುವ ವರೆಗೆ ಎಷ್ಟು ವಿಸ್ತೀರ್ಣದಲ್ಲಿ ಅರಣ್ಯ ಹಾನಿಗೀಡಾಗಿದೆ ಎಂಬ ಮಾಹಿತಿ ಸಂಗ್ರಹಿಸುವುದು ಕಷ್ಟಸಾಧ್ಯ ಎನ್ನುತ್ತಾರೆ ಅಧಿಕಾರಿಗಳು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು