ಇಂದು ಮಡಿಕೇರಿಗೆ ರಣದೀಪ್ ಸಿಂಗ್ ಸುರ್ಜೆವಾಲ ಭೇಟಿ
Twitter
Facebook
LinkedIn
WhatsApp

ಮಡಿಕೇರಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೆವಾಲ ಮಾ.2ರಂದು ಮಡಿಕೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.30ಗಂಟೆಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿತ ವಾಗಿದೆ.
ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷಿö್ಮ ಯೋಜನೆಯಡಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಸದಸ್ಯನಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡುವ ಗ್ಯಾರಂಟಿ ಕಾರ್ಡ್ ನ್ನು ರಣ್ ದೀಪ್ ಸಿಂಗ್ ಸುರ್ಜೇವಾಲ ಬಿಡುಗಡೆ ಮಾಡಲಿದ್ದು, ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವ ನಾರಾಯಣ್, ಎಐಸಿಸಿ ಕಾರ್ಯದರ್ಶಿ, ಕೊಡಗು ಉಸ್ತುವಾರಿ ಹಾಗೂ ಕೇರಳ ಶಾಸಕ ರೋಜಿ ಜಾನ್ ಉಪಸ್ಥಿತರಿರುವರು ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಸುದ್ದಿಗೋಷ್ಠಿಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.