ಉಳ್ಳಾಲ : ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು!
ಮಂಗಳೂರು, ಆಗಸ್ಟ್ 28: ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ಕೇರಳ ಮೂಲದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ಬಳಿಯ ತಲಪಾಡಿ ಪ್ರದೇಶದಲ್ಲಿ ನಡೆದಿದೆ. ಹರಿಪ್ರಸಾದ್ ಆಚಾರ್ಯ (36) ಮೃತ ವ್ಯಕ್ತಿ.
ಕೇರಳದ ಹೊಸಂಗಡಿ ದುರ್ಗಿಪಳ್ಳದ ನಿವಾಸಿಯಾಗಿರುವ ಹರಿಪ್ರಸಾದ್ ಆಚಾರ್ಯ ಸ್ನೇಹಿತರ ಜೊತೆ ಸೇರಿಕೊಂಡು ಸ್ನೇನ ಮಾಡಲೆಂದು ತಲಪಾಡಿಯ ಖಾಸಗಿ ಸ್ಥಳದಲ್ಲಿರುವ ಕೊಳಕ್ಕೆ ಇಳಿದಿದ್ದಾರೆ. ಈ ವೇಳೆ ಕೆಸರಿನಲ್ಲಿ ಸಿಲುಕಿದ ಹರಿಪ್ರಸಾದ್ ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಹರಿಪ್ರಸಾದ್ ಮೃತದೇಹ ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಆರ್ ಟಿಸಿ ಬಸ್ -ಕಾರು ಮುಖಾಮುಖಿ ಡಿಕ್ಕಿ ; ಕಾರಿನಲ್ಲಿದ್ದ 6 ಮಂದಿ ಸಾವು:
ರಾಮನಗರ, ಆಗಸ್ಟ್ 28: ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸಾವನಪ್ಪಿದ ಘಟನೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ.
ಮಹದೇಶ್ವರ ಬೆಟ್ಟದಿಂದ ವಾಪಸ್ ಬರುತ್ತಿದ್ದಾಗ ಅಪಘಾತ ಆಗಿದ್ದು, ಕಾರಿನಲ್ಲಿದ್ದ 6 ಮಂದಿ ಅಸುನೀಗಿದ್ದಾರೆ. ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿದ್ದು, ಕ್ರೇನ್ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ.