ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕದ್ರಿ: 5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Twitter
Facebook
LinkedIn
WhatsApp
ಕದ್ರಿ: 5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

ಕದ್ರಿ: ಮಂಗಳೂರು: ಮೆಡಿಕಲ್‌ ಕಾಲೇಜನ ವಿದ್ಯಾರ್ಥಿಯೊಬ್ಬ ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್ ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜು.31 ರಂದು  ಮಂಗಳೂರಿನಲ್ಲಿ ನಡೆದಿದೆ.

ಮೃತರನ್ನು ಅಡ್ಯಾರ್ ಮೂಲದ ಸಮಯ (21) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕದ್ರಿ ಶಿವಬಾಗ್‌ನಲ್ಲಿ ವಾಸವಾಗಿದ್ದಾರೆ. ಸಮಯ್ ಮನೆಯ ಬಾಲ್ಕನಿಯಲ್ಲಿ ಓದುತ್ತಿದ್ದಾಗ ಅವನ ತಾಯಿ ಕಾರು ತೊಳೆಯಲು ನೆಲಮಾಳಿಗೆಗೆ ಹೋಗುವಂತೆ ಹೇಳಿದ್ದಾರೆ. ಬಳಿಕ ಐದನೇ ಮಹಡಿಯ ಬಾಲ್ಕನಿಯಲ್ಲಿ ಸಮಯ್ ತನ್ನ ತಾಯಿಯೊಂದಿಗೆ ಮಾತನಾಡುತ್ತಿದ್ದ. ಮಾತನಾಡಲು ಬಗ್ಗಿದಾಗ ನೆಲಮಹಡಿಯಿಂದ ಆಯತಪ್ಪಿ ಬಿದ್ದಿದ್ದಾರೆ. 

ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮಳೆ ನೀರಿನಿಂದ ಬಾಲ್ಕನಿಯಲ್ಲಿ ನೆಲ ಒದ್ದೆಯಾಗಿತ್ತು ಎಂದು ತಿಳಿದು ಬಂದಿದೆ. ಸಮಯ್ ತಂದೆ ಸಿವಿಲ್ ಇಂಜಿನಿಯರ್ ಮತ್ತು ತಾಯಿ ಗೃಹಿಣಿ. ದಂಪತಿಗೆ ಇರುವ ಇಬ್ಬರು ಪುತ್ರರಲ್ಲಿ ಸಮಯ್ ಹಿರಿಯನಾಗಿದ್ದ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಪುತ್ತೂರು ರೈಲು ಮಾರ್ಗ ವಿದ್ಯುದೀಕರಣ ಪೂರ್ಣ; ಪ್ರಾಯೋಗಿಕ ಸಂಚಾರ ಯಶಸ್ವಿ

ಮಂಗಳೂರು: ಮಂಗಳೂರಿನ ಪಡೀಲ್ ರೈಲು ನಿಲ್ದಾಣದಿಂದ (Padil Railway Station) ಕಬಕ ಪುತ್ತೂರು (Kabaka Puttur) ರೈಲ್ವೆ ನಿಲ್ದಾಣದ ವರೆಗಿನ ರೈಲು ಮಾರ್ಗದ ವಿದ್ಯುದೀಕರಣ (Electrification) ಕಾಮಗಾರಿ ಪೂರ್ಣಗೊಂಡಿದ್ದು, ಎಲೆಕ್ಟ್ರಿಕಲ್ ರೈಲ್ ಇಂಜಿನ್​​ನ ಯಶಸ್ವಿ ಪ್ರಾಯೋಗಿಕ ಸಂಚಾರ ನಡೆಸಲಾಯಿತು. ಕಬಕ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ (48 ಕಿಮೀ) ವಿದ್ಯುದ್ದೀಕರಣದ ಕಾಮಗಾರಿಯೂ ಭರದಿಂದ ಸಾಗುತ್ತಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು ಮಂಗಳೂರು ನಡುವಣ ಸಂಪರ್ಕದ ಪ್ರಮುಖ ರೈಲು ಮಾರ್ಗ ಇದಾಗಿದೆ.

ಎಲೆಕ್ಟ್ರಿಕಲ್ ರೈಲ್ ಇಂಜಿನ್ ಶುಕ್ರವಾರ ಪ್ರಾಯೋಗಿಕ ಸಂಚಾರ ನಡೆಸಿದೆ. ಪಡೀಲ್​​​ನಿಂದ ಮಧ್ಯಾಹ್ನ 2.30ಕ್ಕೆ ಹೊರಟ ಎಲೆಕ್ಟ್ರಿಕಲ್ ರೈಲ್ ಇಂಜಿನ್ ಸಂಜೆ 4 ಗಂಟೆಗೆ ಕಬಕ ಪುತ್ತೂರು ತಲುಪಿತ್ತು. ನೈಋತ್ಯ ರೈಲ್ವೆಯ ಮುಖ್ಯ ಎಂಜಿನಿಯರ್ ಜೈಪಾಲ್ ಸಿಂಗ್ ಪ್ರಾಯೋಗಿಕ ಸಮಚಾರಕ್ಕೆ ಚಾಲನೆ ನೀಡಿದ್ದರು.

ಶೀಘ್ರದಲ್ಲೇ ಈ ಮಾರ್ಗದಲ್ಲಿ ಎಲೆಕ್ಟ್ರಿಕ್ ರೈಲು ಸಂಚಾರಕ್ಕೆ ಟ್ರ್ಯಾಕ್‌ನ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಕಾಮಗಾರಿ ಅಕ್ಟೋಬರ್​​​ಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಹಾಸನ ಮತ್ತು ಸುಬ್ರಹ್ಮಣ್ಯ ರಸ್ತೆ ವಿದ್ಯುದ್ದೀಕರಣಕ್ಕೆ ಇನ್ನೂ ಸ್ವಲ್ಪ ಸಮಯ ಹಿಡಿಯಲಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು