ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಾಂಜಾ ನಶೆಯಲ್ಲಿ ನಡು ರಸ್ತೆಯಲ್ಲೇ ಯುವಕನ ದಾಂಧಲೆ - ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು!

Twitter
Facebook
LinkedIn
WhatsApp
ಗಾಂಜಾ ನಶೆಯಲ್ಲಿ ನಡು ರಸ್ತೆಯಲ್ಲೇ ಯುವಕನ ದಾಂಧಲೆ - ಸಿನಿಮೀಯ ರೀತಿಯಲ್ಲಿ ಬಂದಿಸಿದ ಪೊಲೀಸರು!

ಮಂಗಳೂರು ಅಗಸ್ಟ್ 20: ಗಾಂಜಾ ನಶೆ ಏರಿಸಿಕೊಂಡಿದ್ದ ಯುವಕನೊಬ್ಬ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ದಾಂಧಲೆ ನಡೆಸಿದ್ದು, ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ್ನು ಸಿನಿಮೀಯ ರೀತಿಯಲ್ಲಿ ಹಿಡಿದು ಜೈಲಿಗಟ್ಟಿದ್ದಾರೆ.

 ಬಂಧಿತನನ್ನು ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್ ಎಂದು ಗುರುತಿಸಲಾಗಿದೆ. ಈತ ನಾಟೆಕಲ್ ಜಂಕ್ಷನ್ ನಲ್ಲಿ ನಶೆಯಲ್ಲಿ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.

 ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು